HomeLatest NewsGOOD NEWS : ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ಸರ್ಕಾರದಿಂದ ಅನುದಾನ...

GOOD NEWS : ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : 2025-26ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ಶಿಕ್ಷಕರ ವೇತನ ವೆಚ್ಚದ ಬಾಬುಗಳಿಗೆ ಅಕ್ಟೋಬರ್-2025 ರಿಂದ ಡಿಸೆಂಬರ್-2025 ಅವಧಿಯ ಮೂರು ತಿಂಗಳ ಅನುದಾನವನ್ನು ಬಿಡುಗಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

2025-26ನೇ ಸಾಲಿನ ಆಯವ್ಯಯದಲ್ಲಿ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ಶಿಕ್ಷಕರ ವೇತನ ಬಾಬ್ತಿನಡಿಯಲ್ಲಿ ನಿಗದಿಪಡಿಸಿರುವ ಅನುದಾನದಲ್ಲಿ ಈ ಕೆಳಕಂಡಂತೆ ಅಕ್ಟೋಬರ್-2025 ರಿಂದ ಡಿಸೆಂಬರ್-2025 ರ ಅವಧಿಯ 3 ತಿಂಗಳ ಅನುದಾನ ರೂ.54457.55 ಲಕ್ಷಗಳನ್ನು (ಐವತ್ತ ನಾಲ್ಕು ಸಾವಿರದ ನಾಲ್ಕು ನೂರ ಐವತ್ತೇಳು ಲಕ್ಷದ ಐವತ್ತೈದು ಸಾವಿರ ರೂಪಾಯಿಗಳು ಮಾತ್ರ) ಬಿಡುಗಡೆ ಮಾಡಿ ನಿಯಮಾನುಸಾರ ಭರಿಸಲು, ಸಂಬಂಧಿಸಿದ ಇಲಾಖಾ ಮುಖ್ಯಸ್ಥರಿಗೆ ಈ ಕೆಳಕಂಡ ಷರತ್ತು ಮತ್ತು ನಿಬಂಧನೆಗಳ ಪಾಲನೆಗೆ ಒಳಪಟ್ಟು ಅನುಮತಿ ನೀಡಿ ಆದೇಶಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular