HomeKarnatakaಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರು/ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ʻಹಳೆ ಪಿಂಚಣಿʼ (OPS) ಜಾರಿ ಬಗ್ಗೆ...

ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರು/ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ʻಹಳೆ ಪಿಂಚಣಿʼ (OPS) ಜಾರಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಖಾಸಗಿ ಅನುದಾನಿತ ಶಾಲೆಗಳಲ್ಲಿ ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸರ್ಕಾರದ ಪತ್ರದಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ಪರಿಶೀಲಿಸಲು ಲಗತ್ತಿಸಿರುವ ಅನುಬಂಧದಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ.

ಉಲ್ಲೇಖಿತ ಸರ್ಕಾರದ ಪತ್ರಗಳು ಮತ್ತು ಅದರೊಂದಿಗಿನ ಅನುಬಂಧವನ್ನು ಈ ಪತ್ರದೊಂದಿಗೆ ಲಗತ್ತಿಸಿ ಕಳುಹಿಸುತ್ತಾ, ಸರ್ಕಾರದ ವತ್ರದಲ್ಲಿ ತಿಳಿಸಿರುವಂತೆ ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ಶಿಕ್ಷಕರು / ಸಿಬ್ಬಂದಿಗಳ ನಿವೃತ್ತಿ ನಂತರ ನಿಗಧಿಪಡಿಸಬೇಕಾದ ಪಿಂಚಣಿ ಲೆಕ್ಕಾಚಾರ ಮಾಡಿ ಪ್ರಾಥಮಿಕ / ಪ್ರೌಢಶಾಲೆಗಳ ಮಾಹಿತಿಯನ್ನು ಪ್ರತ್ಯೇಕವಾಗಿ ಅನುಬಂಧದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆದು ಜಿಲ್ಲಾವಾರು ಕ್ರೋಢೀಕರಿಸಿ ಹಾಗೂ ದೃಢೀಕರಿಸಿ ಈ ಕಛೇರಿಯ ಇ-ಮೇಲ್ ವಿಳಾಸ: [email protected] ಗೆ ಕಳುಹಿಸಲು ತಿಳಿಸಿದೆ. ಮತ್ತು ಒಂದು ವೇಳೆ ಈ ಮಾಹಿತಿಯಲ್ಲಿ ಯಾವುದೇ ಶಿಕ್ಷಕರು / ಸಿಬ್ಬಂದಿಗಳ ಮಾಹಿತಿ ಬಿಟ್ಟು ಹೋಗಿದ್ದಲ್ಲಿ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರುಗಳೇ ನೇರ ಹೊಣೆಗಾರರೆಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular