HomeLatest Newsಜಾತಿ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಗುಡ್ ನ್ಯೂಸ್: ಪರ್ಯಾಯ ರಜೆ, ವಿಶೇಷ ಸಂಭಾವನೆ

ಜಾತಿ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಗುಡ್ ನ್ಯೂಸ್: ಪರ್ಯಾಯ ರಜೆ, ವಿಶೇಷ ಸಂಭಾವನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಗಣತಿಯಲ್ಲಿ ಭಾಗವಹಿಸುವ ಶಿಕ್ಷಕರಿಗೆ ಕಡಿತವಾಗುವ ದಸರಾ ರಜೆ ದಿನಗಳನ್ನು ಪರ್ಯಾಯ ರೀತಿಯಲ್ಲಿ ಒದಗಿಸುವ ಕುರಿತು ಚಿಂತನೆ ನಡೆಸುವುದಾಗಿ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದಸರಾ ರಜಾ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳುವುದು ಅನಿವಾರ್ಯವಾಗಿದೆ. ಶಾಲಾ ಅವಧಿಯಲ್ಲಿ ಶಿಕ್ಷಕರನ್ನು ಸಮೀಕ್ಷೆ ಕಾರ್ಯಕ್ಕೆ ಬಳಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ಆದೇಶದಂತೆ ಅ.7ರವರೆಗೆ ಶಿಕ್ಷಕರು ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ಸಮೀಕ್ಷೆ ಕಾರ್ಯಕ್ಕಾಗಿ ಅವರಿಗೆ ಸರ್ಕಾರ ವಿಶೇಷ ಸಂಭಾವನೆ ನೀಡಲಿದೆ. ಸಮೀಕ್ಷೆಯಲ್ಲಿ ಭಾಗವಹಿಸುವ ಶಿಕ್ಷಕರಿಗೆ ಕಡಿತವಾಗುವ ರಜೆ ದಿನಗಳನ್ನು ಬೇರೆಯ ದಿನಗಳಲ್ಲಿ ಪರ್ಯಾಯವಾಗಿ ಕೊಡಲು ಸಾಧ್ಯವಿದೆಯೇ ಎನ್ನುವ ಬಗ್ಗೆ ಪರಿಶೀಲಿಸಲಾಗುತ್ತದೆ. ಅಂತಹ ಚಿಂತನೆ ರಾಜ್ಯ ಸರ್ಕಾರದ ಮುಂದಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular