HomeLatest NewsBIG NEWS : ರಾಜ್ಯದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು...

BIG NEWS : ರಾಜ್ಯದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು ವಿತರಣೆ ಜವಾಬ್ದಾರಿ ಕಡಿತ

ಬೆಳಗಾವಿ(ಸುವರ್ಣಸೌಧ): ಮೊಟ್ಟೆ, ಬಾಳೆಹಣ್ಣು ವಿತರಿಸುವ ಕಾರ್ಯದಿಂದ ಶಿಕ್ಷಕರು ಪಾಠದಿಂದ ವಿಮುಖರಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಕರ ಹೆಚ್ಚಿನ ಜವಾಬ್ದಾರಿ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ವಿತರಿಸುವ ಶಿಕ್ಷಕರ ಜವಾಬ್ದಾರಿಯನ್ನು ಕಡಿಮೆ ಮಾಡಲಾಗುವುದು. ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವ ಸಮಯಕ್ಕಿಂತ ಮಧ್ಯಾಹ್ನದ ಬಿಸಿಯೂಟದ ಸಿದ್ಧತೆಗೆ ಹೆಚ್ಚಿನ ಸಮಯ ವ್ಯಯ ಮಾಡುತ್ತಿದ್ದಾರೆ. ಇದರಿಂದ ಶಿಕ್ಷಕರ ಮೂಲ ವೃತ್ತಿಗೆ ಧಕ್ಕೆಯಾಗುತ್ತಿದೆ. ಮಕ್ಕಳು ಶಿಕ್ಷಣದಿಂದ ವಿಮುಖರಾಗುತ್ತಿದ್ದಾರೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರಿಗೆ ಇರುವ ಆರೋಗ್ಯ ಸಂಜೀವಿನಿ ವಿಮಾ ಯೋಜನೆಯನ್ನು ಅನುದಾನ ರಹಿತ ಶಾಲಾ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ಸರ್ಕಾರಿ ಶಾಲಾ ಶಿಕ್ಷಕರಿಗೆ ಹಂತ ಹಂತವಾಗಿ ಮುಂಬಡ್ತಿ ನೀಡದೆ ಏಕಕಾಲಕ್ಕೆ ಬಡ್ತಿ ನೀಡುವ ಬಗ್ಗೆ ಇನ್ನೆರಡು ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular