HomeLatest NewsGOOD NEWS: ಶಿಕ್ಷಕರಿಗೆ ಸಿಹಿ ಸುದ್ದಿ: 5ನೇ ತರಗತಿವರೆಗಿನ ಶಿಕ್ಷಕರಿಗೆ 'ಟಿಇಟಿ' ವಿನಾಯಿತಿ: ಸಂಪುಟ ಸಭೆ...

GOOD NEWS: ಶಿಕ್ಷಕರಿಗೆ ಸಿಹಿ ಸುದ್ದಿ: 5ನೇ ತರಗತಿವರೆಗಿನ ಶಿಕ್ಷಕರಿಗೆ ‘ಟಿಇಟಿ’ ವಿನಾಯಿತಿ: ಸಂಪುಟ ಸಭೆ ಅಧಿಕೃತ ನಿರ್ಣಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ್ದು, ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಹೇಳಲಾಗಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ಪದವಿ ಪೂರೈಸಿದ ಪ್ರಾಥಮಿಕ ಶಿಕ್ಷಕರಿಗೆ ಟಿಇಟಿ ಕಡ್ಡಾಯ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಒಂದರಿಂದ ಐದನೇ ತರಗತಿವರೆಗೆ ಬೋಧಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯವಿಲ್ಲ. 6 ಮತ್ತು 7ನೇ ತರಗತಿ ಹಾಗೂ ಮುಂದುವರೆದ ತರಗತಿಗಳಿಗೆ ಟಿಇಟಿ ಅಗತ್ಯವೆಂದು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular