HomeKarnatakaಶಿಕ್ಷಕರಿಗೆ ಗುಡ್ ನ್ಯೂಸ್:  ವರ್ಗಾವಣೆ ತಿದ್ದುಪಡಿ ವಿಧೇಯಕ 2026ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಶಿಕ್ಷಕರಿಗೆ ಗುಡ್ ನ್ಯೂಸ್:  ವರ್ಗಾವಣೆ ತಿದ್ದುಪಡಿ ವಿಧೇಯಕ 2026ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು -ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯ 2026 ಕ್ಕೆ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಗಿದೆ.

ಶಿಕ್ಷಕರ ವರ್ಗಾವಣೆಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ, ಆದರ್ಶ ವಿದ್ಯಾಲಯ ಮತ್ತು ಪಿಎಂಶ್ರೀ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಮೊದಲ ಆದ್ಯತೆ ನಂತರ ಉಳಿದ ಶಾಲೆಗಳಲ್ಲಿನ ಖಾಲಿ ಹುದ್ದೆಗೆ ಅವಕಾಶ ನೀಡುವ ಬಗ್ಗೆ ಮಂಡಿಸಲಾದ ವಿಧೇಯಕದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದು ಅನುಮೋದನೆ ನೀಡಲಾಗಿದೆ.

ಸಚಿವ ಮಧು ಬಂಗಾರಪ್ಪ ಮಾತನಾಡಿ, ಶಿಕ್ಷಕರ ವರ್ಗಾವಣೆ ಸಂದರ್ಭದಲ್ಲಿ ನಿರ್ಣಾಯಕ ಹುದ್ದೆಗಳಿಗೆ ಆದ್ಯತೆಯ ನೇಮಕಾತಿ ಮಾಡಲಾಗುವುದು. ಅಂತೆಯೇ ಕರ್ನಾಟಕ ಪಬ್ಲಿಕ್ ಶಾಲೆ, ಆದರ್ಶ ವಿದ್ಯಾಲಯ, ಪಿಎಂಶ್ರೀ ಶಾಲೆಗಳಲ್ಲಿನ ಖಾಲಿ ಇರುವ ಹುದ್ದೆಗಳಿಗೆ ಮೊದಲ ಆದ್ಯತೆಯಲ್ಲಿ ವರ್ಗಾವಣೆಯಾಗುವ ಶಿಕ್ಷಕರನ್ನು ನೇಮಿಸಲಿದ್ದು, ನಂತರ ರಾಜ್ಯದ ಇತರೆ ಶಾಲೆಗಳ ಹುದ್ದೆಗಳಿಗೆ ವರ್ಗಾವಣೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂರು ರೀತಿಯ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಹೊರತುಪಡಿಸಿ ಉಳಿದ ಬೋಧಕ ಹುದ್ದೆಗಳು, 250 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇರುವ ಶಾಲೆಗಳು, ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಅಥವಾ ಉಪ ಪ್ರಾಂಶುಪಾಲರು ಅಥವಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಗಳ ವರ್ಗಾವಣೆಯನ್ನು ನಿರ್ಣಾಯಕ ಹುದ್ದೆಗಳೆಂದು ಪರಿಗಣಿಸಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುವುದು.

ಇದಕ್ಕಾಗಿ ಶಾಲೆ ಕಾಲೇಜುಗಳಲ್ಲಿ ಸ್ಥಾನಿಕ ಪ್ರಸ್ತುತ ವೃಂದದಲ್ಲಿ ಸಲ್ಲಿಸುತ್ತಿರುವ ಕನಿಷ್ಠ ಸೇವಾ ಅವಧಿ ನಿರಂತರ 12 ವರ್ಷಗಳಾಗಿರಬೇಕು ಎಂದು ವಿಧೇಯಕದಲ್ಲಿ ತಿಳಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಯಾವುದೇ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಅಥವಾ ಉಪನ್ಯಾಸಕರು ಕಲ್ಯಾಣ ಕರ್ನಾಟಕ ಪ್ರದೇಶದ ಹೊರಗೆ ವರ್ಗಾವಣೆ ಕೋರಿಕೆಗಾಗಿ ಇತರೆ ಎಲ್ಲಾ ಅರ್ಹ ಷರತ್ತುಗಳ ಜೊತೆಗೆ ಆ ಪ್ರದೇಶದಲ್ಲಿ ಕನಿಷ್ಠ 10 ವರ್ಷ ಸೇವೆ ಪೂರ್ಣಗೊಳಿಸಿರಬೇಕು.

ಹೆರಿಗೆ ರಜೆಯಿಂದ ಮರಳಿದ ಶಿಕ್ಷಕಿಯರಿಗೆ ಶಿಕ್ಷಕರ ಸಾಮಾನ್ಯ ವರ್ಗಾವಣೆಯಲ್ಲಿ ಮಾತ್ರ ಅನ್ವಯವಾಗುತ್ತದೆ. ಐದು ವರ್ಷಗಳವರೆಗೆ ಒಂದೇ ಕಡೆ ಕೆಲಸ ಮಾಡಲು ಅವರಿಗೆ ಅವಕಾಶ ನೀಡಲಾಗುವುದು. ಡಯಟ್, ಶಿಕ್ಷಕರ ತರಬೇತಿ ಸಂಸ್ಥೆಗಳು, ಶಿಕ್ಷಕರ ಕಲಿಕಾ ಕಾಲೇಜುಗಳು ಸೇರಿದಂತೆ ಇಲಾಖೆಯ ವಿವಿಧ ಕಚೇರಿಗಳಲ್ಲಿನ ಶಿಕ್ಷಕ ಹುದ್ದೆಗಳಲ್ಲಿ ಇರುವವರು ಮುಂದೆ ಶಾಲೆಗಳಿಗೆ ಬೋಧಕ ಹುದ್ದೆಗೆ ಮರಳಬೇಕು. ಜೊತೆಗೆ ಶಿಕ್ಷಕರನ್ನು ಬೋಧಕೇತರ ಹುದ್ದೆಗಳಿಗೆ ವರ್ಗಾಯಿಸುವುದನ್ನು ನಿಷೇಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular