ಬೆಂಗಳೂರು : ಕಿರುತೆರೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬಿಗ್ ಬಾಸ್-12 ಶೀಘ್ರವೇ ಆರಂಭವಾಗಲಿದೆ. ಮೂಲಗಳ ಪ್ರಕಾರ ಸೆಪ್ಟೆಂಬರ್ ಅಂತ್ಯಕ್ಕೆ ಶೋ ಆರಂಭವಾಗಲಿದೆ.ಸೆಪ್ಟೆಂಬರ್ 28 ರಿಂದ ಶೋ ಆರಂಭವಾಗಲಿದೆ ಎನ್ನಲಾಗಿದ್ದು, ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಈಗಾಗಲೇ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾಗಿದೆ. ಸಿನಿಮಾ ಹಾಗೂ ಕಿರುತೆರೆ ನಟ-ನಟಿಯರು ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ. ಸದ್ಯ, ಪ್ರೋಮೋ ರಿಲೀಸ್ ಆಗಿ ಪ್ರೇಕ್ಷಕರ ಗಮನ ಸೆಳೆದಿದೆ.
ಈ ಬಾರಿ ಕಿಚ್ಚ ಸುದೀಪ್ ಅವರೇ ಬಿಗ್ ಬಾಸ್-12 ಗೆ ನಿರೂಪಣೆ ಮಾಡುತ್ತಿದ್ದಾರೆ. ಈಗಾಗಲೇ ಹಲವು ಸಂಭಾವ್ಯ ಸ್ಪರ್ಧಿಗಳ ಹೆಸರುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಬಿಗ್ ಬಾಸ್-10 ರಲ್ಲಿ ನಟ ಕಾರ್ತಿಕ್ ಬಿಗ್ ಬಾಸ್ ಟ್ರೋಫಿ ಮುಡಿಗೇರಿಸಿಕೊಂಡಿದ್ದು, ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದರು.ಬಿಗ್ ಬಾಸ್-11 ಸೀಸನ್ ನಲ್ಲಿ ಹನುಮಂತ ವಿನ್ನರ್ ಆಗಿದ್ದರು.
A post shared by Colors Kannada Official (@colorskannadaofficial)
You Might Also Like
TAGGED:ಬಿಗ್ ಬಾಸ್