HomeKarnatakaಹಿಂದುಳಿದ ವರ್ಗದ ಸಮುದಾಯಗಳಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗದ ಸಮುದಾಯಗಳಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಆಸಕ್ತ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ನ ವೆಬ್ಸೈಟ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಆ. 31 ರೊಳಗಾಗಿ ಅರ್ಜಿ ಸಲ್ಲಿಸಬಹುದು.

*ಯೋಜನೆಗಳ ವಿವರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ:*
ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಈ ಯೋಜನೆಗೆ ಅರ್ಹರಾಗಿದ್ದು, ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಟ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.

ರೂ.1 ಲಕ್ಷಗಳವರೆಗಿನ ಸಾಲದಲ್ಲಿ ಶೇ.20ರಷ್ಟು ಗರಿಷ್ಟ ರೂ.20 ಸಾವಿರ ಸಹಾಯಧನ ಹಾಗೂ ರೂ.1.01 ಲಕ್ಷದಿಂದ ರೂ.2 ಲಕ್ಷದವರೆಗೆ ಶೇ.15 ರಷ್ಟು ಕನಿಷ್ಟ ರೂ.20 ಸಾವಿರಗಳವರೆಗೆ ಗರಿಷ್ಟ ರೂ.30 ಸಾವಿರ ಸಹಾಯಧನ, ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ನೇರ ಸಾಲ ಸೌಲಭ್ಯ ಪಡೆಯಬಹುದು.
*ಗಂಗಾ ಕಲ್ಯಾಣ ನೀರಾವರಿ ಯೋಜನೆ:*
ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು.
*ಅರಿವು-ಶೈಕ್ಷಣಿಕ ಸಾಲ ಯೋಜನೆ:*
ಸಿಇಟಿ ಮತ್ತು ಎನ್ಇಇಟಿ ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿAಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳ ವ್ಯಾಸಂಗಕ್ಕೆ ವಾರ್ಷಿಕ 1 ಲಕ್ಷ ರೂ.ಗಳಂತೆ ಕೋರ್ಸ್ನ ಅವಧಿಗೆ ಗರಿಷ್ಟ 4 ಲಕ್ಷ ರೂ.ಗಳಿಂದ ರೂ.5 ಲಕ್ಷಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುವುದು.

*ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ:
ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿಹೆಚ್ಡಿ ಪೋಸ್ಟ್ ಡಾಕ್ಟçಲ್ ಮತ್ತು ಮಾಸ್ಟರ್ ಡಿಗ್ರಿ, ಇಂಜಿನಿಯರಿಂಗ್, ಟೆಕ್ನಾಲಜಿ, ಮ್ಯಾನೇಜ್ಮೆಂಟ್, ಕಾಮರ್ಸ್, ಸೈನ್ಸ್, ಟೆಕ್ನಾಲಜಿ, ಅಗ್ರಿಕಲ್ಚರ್, ಅಲೈಡ್ ಸೈನ್ಸಸ್, ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್, ಸೋಸಿಯಲ್ ಸೈನ್ಸಸ್ ವ್ಯಾಸಂಗಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.

ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿದ್ದು, ಕ್ಯೂಎಸ್ ವಿಶ್ವ ರ್ಯಾಂಕಿಂಗ್ 500ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಟ 10 ಲಕ್ಷ ಹಾಗೂ ಪೂರ್ಣ ಕೋರ್ಸ್ ಅವಧಿಗೆ ರೂ.20 ಲಕ್ಷ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು.
ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ, ಜಾಮೀನುದಾರ, ಪೋಷಕರ ಸ್ಥಿರಾಸ್ತಿಯನ್ನು ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ, ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೆಟ್ ಪ್ರತಿ ಒದಗಿಸಬೇಕು.

*ಸ್ವಾವಲಂಬಿ ಸಾರಥಿ ಯೋಜನೆ:*
ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ  ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಟ ರೂ.3 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

*ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)

ಹಿಂದುಳಿದ ವರ್ಗಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು, ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20ರಷ್ಟು, ಗರಿಷ್ಟ ರೂ.1 ಲಕ್ಷಗಳ ಸಹಾಯಧನ ಮಂಜೂರು ಮಾಡಲು ಉಳಿಕೆ ಮೊತ್ತವನ್ನು ಬ್ಯಾಂಕ್ನಿAದ ಸಾಲ ಸೌಲಭ್ಯ ನೀಡಲಾಗುತ್ತದೆ.

*ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ:*
ಹಿಂದುಳಿದ ವರ್ಗಗಳ ವಿದ್ಯಾವಂತ ಯುವಜನರನ್ನು ಗುರುತಿಸಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಐಟಿಸಿಎಸ್, ಜಿಟಿಟಿಸಿ, ಕೆಜಿಟಿಟಿಐ, ಎಟಿಡಿಸಿ, ಮತ್ತು ವಿಯುಟಿಗಳ ಮೂಲಕ ವಿವಿಧ ಅಲ್ಪಾವಧಿ ಮತ್ತು ಉತ್ಕೃಷ್ಟ ಕೌಶಲ್ಯ ತರಬೇತಿಯನ್ನು ನೀಡಿ ಅವರ ಉದ್ಯೋಗ ಸಾಮರ್ಥ್ಯವನ್ನು ಹಾಗೂ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಉದ್ಯೋಗಿ ಮುಖಿಗಳನ್ನಾಗಿಸುವುದು ಈ ಯೋಜನೆಯ ಉದ್ದೇಶ.

*ಹೊಲಿಗೆ ಯಂತ್ರ ವಿತರಣೆ ಯೋಜನೆ:*
ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98 ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷ ಒಳಗಿರಬೇಕು. ಹಾಗೂ ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ಈ ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು  ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.2023-24ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular