HomeLatest NewsGOOD NEWS : ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ...

GOOD NEWS : ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆಯು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಯಡಿ 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಪ್ರೌಢ ಶಾಲಾಯಿಂದ ಸ್ನಾತಕೋತ್ತರ ಪದವಿಯವರಿಗೆ ಹಾಗೂ ವೈದ್ಯಕೀಯ/ಇಂಜಿಯಿಯರಿಗ್ ವ್ಯಾಸಂಗ ಮಾಡುತ್ತಿರುವ ಹಾಗೂ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50 ರಷ್ಟು, ಪ.ಜಾ/ಪ.ಪಂ ಶೇ. 45% ರಷ್ಟು ಅಂಕ ಪಡೆದು ತೇರ್ಗಡೆಯೊಂದಿರುವ ಮತ್ತು ಕಾರ್ಮಿಕನ ಮಾಸಿಕ ವೇತನ ರೂ. 35,000/- ಗಳಿಗಿಂತ ಕಡಿಮೆಯಿರುವ ಜಿಲ್ಲೆಯ ಸಂಘಟಿತ ಕಾರ್ಮಿಕರ ಇಬ್ಬರು ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಮಂಡಳಿಯ ವೆಬ್‌ಸೈಟ್ www.klwbapps.karnataka.gov.in ರಲ್ಲಿ ದಿ: 31/12/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ. 48, 1 ಮತ್ತು 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂ.ಸಂ.: 080-23475188/ 8277291175/ 8277120505 ಮೂಲಕ ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular