ಬೆಂಗಳೂರು : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ಶ್ರಮಶಕ್ತಿ ಸಾಲ/ ಸಹಾಯಧನ ಯೋಜನೆ , ಶ್ರಮ ಶಕ್ತಿ (ವಿಶೇಷ ಮಹಿಳಾ ಸಾಲ / ಸಹಾಯಧನ)ಯೋಜನೆ, ಟ್ಯಾಕ್ಸಿ / ಗೂಡ್ಸ್ ವಾಹನ ಖರೀದಿ ಸಹಾಯಧನ ಯೋಜನೆ, ವೃತ್ತಿ ಪೋತ್ಸಾಹ ಸಾಲ / ಸಹಾಯಧನ ಯೋಜನೆ, ಕ್ರಿಶ್ಚಿಯನ್ ಸಮುದಾಯ ಆಧಾರಿತ ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನ, ಅರಿವು (ವಿದ್ಯಾಭ್ಯಾಸ ಸಾಲ ಯೋಜನೆ) ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ / ನೇರಸಾಲ ಯೋಜನೆ ಮತ್ತು ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ವೆಬ್ ಸೈಟ್ www.kccdclonline.karnataka.gov.in ನಲ್ಲಿ ನವೆಂಬರ್ 30, 2025ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ ( ದಕ್ಷಿಣ ವಿಭಾಗ), ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಎಸ್.ಎಫ್. 2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು ನಗರ ಜಿಲ್ಲೆಅಥವಾ ದೂರವಾಣಿ ಸಂಖ್ಯೆ : 080-22114817, ಇ-ಮೇಲ್ kccdchelpline@gmail.com, ಸಹಾಯವಾಣಿ ಸಂಖ್ಯೆ : 6360753075 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ (ದಕ್ಷಿಣ ವಿಭಾಗ) ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
