ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಆಭಿವೃದ್ದಿ ನಿಗಮ ವತಿಯಿಂದ 2025-26 ನೇ ಸಾಲಿನ ಕ್ರಿಶ್ಚಿಯನ್ ಸಮುದಾಯದವರಿಗೆ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಿಇಟಿ/ನೀಟ್ ಮೂಲಕ ಆಯ್ಕೆಯಾಗುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು, ವೃತ್ತಿಪರ ಶಿಕ್ಷಣಗಳಾದ ಎಂಬಿಬಿಎಸ್, ಎಂಡಿ, ಎಂಎಸ್, ಬಿಇ, ಬಿಟೆಕ್, ಎಂಇ, ಎಂ-ಟೆಕ್, ಬಿಡಿಎಸ್, ಎಂಡಿಎಸ್, ಬಿ-ಆಯುಷ್, ಎಂ-ಆಯುಷ್, ಎಂಬಿಎ, ಎಂಸಿಎ, ಎಲ್‌ಎಲ್‌ಬಿ, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಮಾಸ್ಟರ್ ಆಫ್ ಆರ್ಕಿಟೆಕ್ಚರ್ ಕೋರ್ಸ್ ಮಾಡಲು ಬಯಸಿದರೆ ಅವರ ವ್ಯಾಸಂಗ ಪೂರ್ಣಗೊಳ್ಳುವವರೆಗೆ ಪ್ರತಿ ವರ್ಷಕ್ಕೆ ರೂ.50 ಸಾವಿರದಿಂದ ರೂ. 5 ಲಕ್ಷದವರೆಗೂ ಸಾಲು ಮಂಜೂರು ಮಾಡಲಾಗುತ್ತದೆ. ವ್ಯಾಸಾಂಗ ಪೂರ್ಣಗೊಂಡ 6 ತಿಂಗಳ ನಂತರ ವಿದ್ಯಾರ್ಥಿಯು ಶೇ.2ರ ವಾರ್ಷಿಕ ಸೇವಾ ಶುಲ್ಕದೊಂದಿಗೆ ಸಾಲ ಮರುಪಾವತಿ ಮಾಡಬೇಕು.
ವಿದೇಶಿ ವ್ಯಾಸಂಗ ಸಾಲ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ ಮತ್ತು ಭಾರತ ದೇಶದ ಪ್ರತಿಷ್ಠೆಯ ಐಐಟಿಎಸ್ ಐಐಎಂಎಸ್, ಐಎಸ್‌ಸಿ ಸಂಸ್ಥೆಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಪಡೆಯಲು ರೂ.20 ಲಕ್ಷದವರೆಗೂ ಸಾಲವನ್ನು ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಒದಗಿಸಲಾಗುವುದು.
ಸ್ವಾವಲಂಬಿ ಸಾರಥಿ ಯೋಜನೆಯಡಿ ಟ್ಯಾಕ್ಸಿ/ಗೂಡ್ಸ್ ವಾಹನಗಳನ್ನು ಖರೀದಿಸಲು ಬಯಸುವ ಫಲಾನುಭವಿಗಳಿಗೆ ಬ್ಯಾಂಕಿನಿAದ ಸಾಲ ಮಂಜೂರಾತಿಯಾಗಿದ್ದಲ್ಲಿ ನಿಗಮದಿಂದ ವಾಹನದ ಮೌಲ್ಯದ ಶೇ.50 ರಷ್ಟು ಸಹಾಯಧನ ಗರಿಷ್ಠ ರೂ.3 ಲಕ್ಷವನ್ನು ನೀಡಲಾಗುವುದು. (ಪ್ಯಾಸೆಂಜರ್ ಆಟೋರಿಕ್ಷಾ ಖರೀದಿಸಲು ಗರಿಷ್ಠ ರೂ.75 ಸಾವಿರ ಸಹಾಯಧನವನು ನೀಡಲಾಗುತ್ತದೆ)
ಶ್ರಮ ಶಕ್ತಿ ಸಾಲ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯ ಕುಲ ಕಸುಬುದಾರರಿಗೆ ತರಬೇತಿ ನೀಡಿ, ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ದಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ದಿಗೊಳಿಸಲು ನಿಗಮದಿಂದ ಶೇ.50 ರಷ್ಟು ಸಹಾಯಧನದೊಂದಿಗೆ ಕಡಿಮೆ ಬಡ್ಡಿದರದಲ್ಲಿ ರೂ.50,000 ಸಾಲ ಸೌಲಭ್ಯವನ್ನು ನೀಡಲಾಗುವುದು.
ವೃತ್ತಿ ಪ್ರೋತ್ಸಾಹ ಯೋಜನೆಯಡಿ ಹಣ್ಣು, ಹಂಪಲು, ಕೋಳಿ ಮತ್ತು ಮೀನು ಮಾರಾಟ, ಎಳನೀರು, ಕಬ್ಬಿನಹಾಲು, ತಂಪು ಪಾನೀಯ ಮಾರಾಟ, ಬೇಕರಿ, ಲ್ಯಾಂಡ್ರಿ, ಡ್ರೆöÊಕ್ಲಿನಿಂಗ್, ಹೇರ್‌ಡ್ರೆಸಿಂಗ್ ಸಲೂನ್, ಬ್ಯೂಟಿ ಪಾರ್ಲರ್, ವಾಟರ್‌ವಾಶ್, ಪಂಕ್ಚರ್, ಮೆಕ್ಯಾನಿಕ್ ಶಾಪ್, ದ್ವಿಚಕ್ರ, ತ್ರಿಚಕ್ರ ವಾಹನ ರಿಪೇರಿ, ಬಿದರಿ ವೇರ್ ಕೆಲಸ, ರೇಷ್ಮೆ ರೀಲಿಂಗ್ ಮತ್ತು ಟ್ವಿಸ್ಟಿಂಗ್, ಆಟಿಕೆ ಗೊಂಬೆ ತಯಾರಿಕೆ ಇತ್ಯಾದಿ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ದಿ ಪಡಿಸಲು ನಿಗಮದಿಂದ ಶೇ.50 ರಷ್ಟು ಸಹಾಯಧನದೊಂದಿಗೆ ರೂ.1 ಲಕ್ಷ ಸಾಲ ನೀಡಲಾಗುವುದು.
ಗಂಗಾ ಕಲ್ಯಾಣ ಸಹಾಯಧನ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆ ಬಾವಿಯನ್ನು ಕೊರೆದು, ಪಂಪ್‌ಸೆಟ್ ಮೋಟರ್ ಹಾಗೂ ವಿದ್ಯುದ್ದೀಕರಣ ಒದಗಿಸಲಾಗುತ್ತದೆ. ಈ ಯೋಜನೆಯಡಿ ರೂ. 3 ಲಕ್ಷದವರೆಗೆ ಸಹಾಯಧನ ನೀಡಲಾಗುವುದು.
ಶ್ರಮಶಕ್ತಿ ವಿಶೇಷ ಮಹಿಳಾ ಸಾಲ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದ ವಿಧವೆ, ವಿಚ್ಚೇದಿತ, ಅವಿವಾಹಿತ ಮಹಿಳೆಯರ ಆರ್ಥಿಕ ಸಬಲೀಕರಣದ ವಿಶೇಷ ಯೋಜನೆಯಡಿ ರೂ.25 ಸಾವಿರ ಸಾಲ ಹಾಗೂ ರೂ.25 ಸಾವಿರ ಸಹಾಯಧನ ಸೇರಿ ಒಟ್ಟು ರೂ.50 ಸಾವಿರ ಸಾಲವನ್ನು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ಒದಗಿಸಲಾಗುವುದು.
ವ್ಯಾಪಾರ/ ಉದ್ದಿಮೆ ನೇರಸಾಲ ಯೋಜನೆಯಡಿ ವ್ಯಾಪಾರ, ಉದ್ಯಮ, ಸೇವಾಕ್ಷೇತ್ರ ಮತ್ತು ಕೃಷಿ ಆಧಾರಿತ ಚಟುವಟಿಕೆಗಳನ್ನು ಕೈಗೊಳ್ಳಲು ನಿಗಮಕ್ಕೆ ಆಸ್ಥಿಯ (ಕಟ್ಟಡ/ಭೂಮಿ) ಅಡಮಾನದ ಮೇಲೆ ರೂ.5 ಲಕ್ಷದಿಂದ ಗರಿಷ್ಟ ರೂ.20 ಲಕ್ಷದವರೆಗೆ ಶೇ.4 ರ ಬಡ್ಡಿದರದಲ್ಲಿ (ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇದ್ದರೆ) ಮತ್ತು ಶೇ.6 ರ ಬಡ್ಡಿದರದಲ್ಲಿ (ವಾರ್ಷಿಕ ಆದಾಯ ರೂ.8 ಲಕ್ಷದಿಂದ ರೂ.15 ಲಕ್ಷದವರೆಗೆ ಇದ್ದರೆ) ಸಾಲವನ್ನು ನೀಡಲಾಗುವುದು.
ಸಮುದಾಯ ಆಧಾರಿತ ಕೌಶಲ್ಯ ಅಭಿವೃದ್ದಿ ತರಬೇತಿ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದ ನಿರುದ್ಯೋಗಿ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ/ ಕಚೇರಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಕ್ಷೇತ್ರಗಳಲ್ಲಿ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿ ಕ್ರಿಶ್ಚಿಯನ್ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟಿವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿ ಮಾಡುವ ಸಲುವಾಗಿ ರಾಷ್ಟಿçÃಕೃತ/ಶೆಡ್ಯೂಲ್ ಬ್ಯಾಂಕ್/ಆರ್‌ಬಿಐ ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿAದ ಪಡೆಯುವ ಸಾಲಕ್ಕೆ ಘಟಕ ವೆಚ್ಚದ ಶೇ.50 ಅಥವಾ ಗರಿಷ್ಟ ರೂ.2 ಲಕ್ಷ ಸಹಾಯಧನವನ್ನು ನಿಗಮದಿಂದ ಒದಗಿಸಲಾಗುವುದು. ಸಹಾಯಧನವು ಬ್ಯಾಂಕ್ ಎಂಡ್ ಸಬ್ಸಿಡಿಯಾಗಿದ್ದು, ಸ್ವಸಹಾಯ ಸಂಘಗಳು ಆರ್ಥಿಕ ಬ್ಯಾಂಕ್‌ಗಳಿAದ ಪಡೆದ ಸಾಲದ ಮರುಪಾವತಿಗೆ ಹೊಂದಾಣಿಕೆ ಮಾಡಲಾಗುವುದು.
ಈ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರಬೇಕು. ಅರ್ಜಿದಾರರು ಕರ್ನಾಟಕದ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷದೊಳಗಿರಬೇಕು. ಪ್ರೋತ್ಸಾಹ ಯೋಜನೆಗೆ ಕುಟುಂಬದ ವಾರ್ಷಿಕ ಆದಾಯ ರೂ.6 ಲಕ್ಷದೊಳಗಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಟ 18 ರಿಂದ 55 ವರ್ಷಗಳ ಒಳಗಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸದ ದೃಢೀಕರಣ ಪತ್ರ ಮತ್ತು ಪಡಿತರ ಚೀಟಿಯನ್ನು ಹೊಂದಿರಬೇಕು. ನಿಗಮದ ಇತರ ಯೋಜನೆಯಡಿಗಳಲ್ಲಿ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ನಿಗಮದಿಂದ ಈಗಾಗಲೇ ಸಾಲ ಸೌಲಭ್ಯ ಪಡೆದಿರಬಾರದು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು. ಅರ್ಜಿದಾರರು ಐಎಫ್‌ಎಸ್‌ಸಿ ಕೋಡ್ ಹೊಂದಿರುವ ಬ್ಯಾಂಕ್‌ಗಳಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು.
ಆಸಕ್ತರು www.kccdonline.karnataka.gov.in ಮೂಲಕ ನ.30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-228262 ಗೆ ಸಂಪರ್ಕಿಸಬಹುದು.
