ಬೆಂಗಳೂರು : ಕರ್ನಾಟಕ ಕ್ರಿಶ್ಚಿಯನ್ ಸಮುದಾಯಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನಲ್ಲಿ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ (ಟ್ಯಾಕ್ಸಿ/ ಗೂಡ್ಸ್/ ಪ್ಯಾಸೆಂಜರ್ ಆಟೋರೀಕ್ಷಾ), ಶ್ರಮ ಶಕ್ತಿ ಸಾಲ ಯೋಜನೆ, ಶ್ರಮ ಶಕ್ತಿ (ವಿಶೇಷ ಮಹಿಳಾ) ಯೋಜನೆ), ವ್ಯಾಪಾರ/ ಉದ್ಯಮಗಳಿಗೆ ನೇರಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಅರಿವು (ವಿದ್ಯಾಭ್ಯಾಸ ಸಾಲ) ಯೋಜನೆ ಮತ್ತು ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ವೆಬ್ ಸೈಟ್ www.kccdclonline.karnataka.gov.in ನಲ್ಲಿ ನವೆಂಬರ್ 30, 2025ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಉತ್ತರ ವಿಭಾಗ, ನಂ.40,2ನೇ ಅಡ್ಡರಸ್ತೆ, ಇಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ, 4ನೇ ಮುಖ್ಯ ರಸ್ತೆ, ವಸಂತಪ್ಪ ಬ್ಲಾಕ್, ಗಂಗಾನಗರ, ಬೆಂಗಳೂರು-560 032 ಅಥವಾ ಇ-ಮೇಲ್ kccdchelpline@gmail.com ಅಥವಾ ಸಹಾಯವಾಣಿ ಸಂಖ್ಯೆ : 6360753075 ಅಥವಾ ಕಛೇರಿಯ ದೂರವಾಣಿ ಸಂಖ್ಯೆ : 080-23539786 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಉತ್ತರ ವಿಭಾಗ, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		