HomeKarnatakaವಿಕಲಚೇತನರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

2023-24 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ 05 ಫಲಾನುಭವಿ ಆಧಾರಿತ ಯೋಜನೆಗಳಡಿ ಸೇವಾಸಿಂಧು ತಂತ್ರಾಂಶದಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬೈಲ್ಕಿಟ್ ಯೋಜನೆ, ಸಾಧನ ಸಲಕರಣೆಗಳ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗದೆ.

ವಿಕಲಚೇತನ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಪೋರ್ಟಲ್ https://sevasidhu.karnataka.gov.in/Sevasindhu/kannada ನಲ್ಲಿ ಯೋಜನೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ಜ.30 ಕಡೆಯ ದಿನವಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಹಾರ್ಡ್ ಪ್ರತಿಯನ್ನು ದಾಖಲಾತಿಗಳೊಂದಿಗೆ ಲಗತ್ತಿಸಿ ಆಯಾ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿಆರ್ಡಬ್ಲ್ಯು) ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು(ಎಂಆರ್ ಡಬ್ಲ್ಯು) ಗಳಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಎಂಆರ್ಡಬ್ಲ್ಯು ಗಳ ದೂ.ಸಂ: ಶಿವಮೊಗ್ಗ 9980150110, ಭದ್ರಾವತಿ 7899137243, ಶಿಕಾರಿಪುರ-9741161346, ತೀರ್ಥಹಳ್ಳಿ-9480767638, ಸಾಗರ-9535247757, ಸೊರಬ-9110493122, ಹೊಸನಗರ-9731922693 ಹಾಗೂ ಕಚೇರಿ ದೂ.ಸಂ 08182-295234, 251676 ಮತ್ತು ವಿಳಾಸಕ್ಕೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular