ನವದೆಹಲಿ: ವಿಶೇಷ ಚೇತನ ಅಭ್ಯರ್ಥಿಗಳಿಗೆ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ಸಿಹಿ ಸುದ್ದಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ವಿಶೇಷ ಚೇತನ ಅಭ್ಯರ್ಥಿಗಳಿಗೆ ಅವರು ಆಯ್ದುಕೊಂಡ ಪರೀಕ್ಷಾ ಕೇಂದ್ರ ನೀಡಲು ನಿರ್ಧರಿಸಲಾಗಿದೆ.
ವಿಕಲಚೇತನ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು, ತಂಗಲು ಹೆಚ್ಚಿನ ಸಮಸ್ಯೆ ಎದುರಿಸುತ್ತಾರೆ. ಅವರಿಗೆ ಅನುಕೂಲಕರವಾದ ಪರೀಕ್ಷಾ ಕೇಂದ್ರ ಆಯ್ಕೆ ಮಾಡಲು ಅವಕಾಶ ನೀಡಲಾಗುವುದು. ಅವರು ಅರ್ಜಿಯಲ್ಲಿ ನಮೂದಿಸಿದ ಮೊದಲ ಕೇಂದ್ರವನ್ನು ಅವರಿಗೆ ನೀಡಲಾಗುವುದು. ಇದರಿಂದ ವಿಕಲಚೇತನ ಅಭ್ಯರ್ಥಿಗಳು ಪರೀಕ್ಷೆಗೆ ಸುಲಭವಾಗಿ ಹಾಜರಾಗಲು ಸಹಕಾರಿಯಾಗುತ್ತದೆ ಎಂದು ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷ ಅಜಯ್ ಕುಮಾರ್ ತಿಳಿಸಿದ್ದಾರೆ.
