HomeKarnatakaBIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ 575 ಕೋಟಿ ಬರ...

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ 575 ಕೋಟಿ ಬರ ಪರಿಹಾರದ ಹಣ ಬಿಡುಗಡೆ

ಕೊಡಗು : ಬರ ಪರಿಹಾರ ನಿರೀಕ್ಷೆಯಲ್ಲಿದ್ದಂತ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸರ್ಕಾರದಿಂದ 32 ಲಕ್ಷ ರೈತರಿಗೆ 575 ಕೋಟಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ರಾಜ್ಯಾದ್ಯಂತ ಬರ ಪೀಡಿತ ಪ್ರದೇಶಗಳಲ್ಲಿ ಪ್ರತಿ ರೈತರಿಗೆ ತಲಾ 2,000 ರೂ. ನಂತೆ 32 ಲಕ್ಷ ರೈತರಿಗೆ ಈವರೆಗೆ 575 ಕೋಟಿ ರೂ. ಹಣವನ್ನು ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ಯಾವುದೇ ಹಣ ಬಿಡುಗಡೆ ಆಗಿಲ್ಲ . ಹೀಗಾಗಿ ರಾಜ್ಯ ಸರ್ಕಾರ ಮೊದಲ ಕಂತಿನಲ್ಲಿ ರೈತರಿಗೆ 2,000 ರೂ ನೀಡಲು ನಿರ್ಧರಿಸಿ ಈಗಾಗಲೇ 32 ಲಕ್ಷ ರೈತರಿಗೆ ಪರಿಹಾರದ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಫಾರ್ಮ್ 57ರ ಅಡಿಯಲ್ಲಿ ಸಲ್ಲಿಸಲಾಗಿರುವ ಬಗರ್ ಹುಕುಂ ಅರ್ಜಿಗಳನ್ನು ಶೀಘ್ರ ವಿಲೇವಾರಿಗೊಳಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕೋರ್ಟ್ ಆದೇಶಿಸಿದೆ. ಹೀಗಾಗಿ ಅಧಿಕಾರಿಗಳು ಬಗರ್ ಹುಕುಂ ಆ್ಯಪ್ ಸಹಾಯದಿಂದ ಅರ್ಹರಿಗೆ ಶೀಘ್ರವಾಗಿ ಸಾಗುವಳಿ ಚೀಟಿ ಮಂಜೂರು ಮಾಡಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular