HomeLatest NewsGOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಪಂಪ್ ಸೆಟ್'ಗಳಿಗೆ ಹಗಲಲ್ಲೇ 7...

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಪಂಪ್ ಸೆಟ್’ಗಳಿಗೆ ಹಗಲಲ್ಲೇ 7 ಗಂಟೆ 3 ಪೇಸ್ ವಿದ್ಯುತ್.!

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ರೈತರ ಪಂಪ್‌ಸೆಟ್‌ಗಳಿಗೆ ದಿನವಹಿ 7 ಗಂಟೆಗಳ ಕಾಲ ನಿರಂತರವಾಗಿ 3 ಫೇಸ್ ವಿದ್ಯುತ್ ಸರಬರಾಜು ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ತಾಂತ್ರಿಕ ಸಾಧ್ಯತೆಗಳ ಆಧಾರದ ಮೇಲೆ ಹಗಲಿನ ವೇಳೆಯಲ್ಲೇ ವಿದ್ಯುತ್ ನೀಡಲು ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವ ಕೆ.ಜೆ ಜಾರ್ಜ್ ಸ್ಪಷ್ಟಪಡಿಸಿದ್ದಾರೆ.

7 ಗಂಟೆಗಳ 3 ಫೇಸ್ ವಿದ್ಯುತ್ : ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ (Escoms) ವ್ಯಾಪ್ತಿಯಲ್ಲಿ ರೈತರಿಗೆ ಪ್ರತಿದಿನ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ನೀಡಲಾಗುತ್ತಿದೆ.ತಾಂತ್ರಿಕ ಸೌಲಭ್ಯವಿರುವ ಕಡೆಗಳಲ್ಲಿ ರೈತರ ಅನುಕೂಲಕ್ಕಾಗಿ ಹಗಲಿನಲ್ಲೇ ವಿದ್ಯುತ್ ನೀಡಲಾಗುತ್ತಿದೆ. ಸಾಧ್ಯವಿಲ್ಲದ ಕಡೆಗಳಲ್ಲಿ ವಿವಿಧ ‘ಬ್ಯಾಚ್‌ಗಳ’ ಮೂಲಕ ಸರಬರಾಜು ಮಾಡಲಾಗುತ್ತಿದೆ.ಕೃಷಿ ಫೀಡರ್‌ಗಳನ್ನು ಸೌರೀಕರಣಗೊಳಿಸುವ ಮೂಲಕ ಹಗಲಿನಲ್ಲಿ ನಿರಂತರ ವಿದ್ಯುತ್ ನೀಡಲು 2767 ಮೆಗಾವ್ಯಾಟ್ ಸಾಮರ್ಥ್ಯದ ಯೋಜನೆಗಳಿಗೆ ಕಾರ್ಯಾದೇಶ ನೀಡಲಾಗಿದೆ. ಇದರಲ್ಲಿ ಈಗಾಗಲೇ 326 ಮೆಗಾವ್ಯಾಟ್ ಯೋಜನೆಗಳು ಪೂರ್ಣಗೊಂಡಿವೆ.

ಮುಖ್ಯಮಂತ್ರಿ ಸೌರ ಕೃಷಿಯೋಜನೆ (CMSKY): 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ, ಕುಸುಮ್-ಸಿ ಮಾದರಿಯಲ್ಲಿ 3000 ಮೆಗಾವ್ಯಾಟ್ ಸಾಮರ್ಥ್ಯದ ವಿಕೇಂದ್ರೀಕೃತ ಸೌರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂಲಸೌಕರ್ಯ ಅಭಿವೃದ್ಧಿ: ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ತಡೆಯಲು ಹೊಸ ಉಪಕೇಂದ್ರಗಳ ಸ್ಥಾಪನೆ, ಪ್ರತ್ಯೇಕ ಪ್ರಸರಣ ಮಾರ್ಗಗಳ ನಿರ್ಮಾಣ ಮತ್ತು ಹಳೆಯ ಟ್ರಾನ್ಸ್‌ಫಾರ್ಮರ್‌ಗಳ ಉನ್ನತೀಕರಣ ಕಾಮಗಾರಿಗಳು ಭರದಿಂದ ಸಾಗಿವೆ.

ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ತಾಂತ್ರಿಕ ಸಾಧ್ಯತೆಯಿರುವ ಪ್ರದೇಶಗಳಲ್ಲಿ ರೈತರ ಪಂಪ್ ಸೆಟ್‌ಗಳಿಗೆ ಹಗಲಿನ ವೇಳೆಯಲ್ಲಿಯೇ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್‌ನ್ನು ಸರಬರಾಜು ಮಾಡಲಾಗುತ್ತಿದೆ.ಮುಂದುವರೆದು, ಕೃಷಿ ಫೀಡರ್‌ಗಳಿಗೆ ಹಗಲಿನ ವೇಳೆಯಲ್ಲಿಯೇ ನಿರಂತರ 3-ಫೇಸ್ ವಿದ್ಯುತ್ ಸರಬರಾಜು ವ್ಯವಸ್ಥೆ ಮಾಡಲು ಪಿ ಎಂ ಕುಸುಮ್-ಸಿ ಯೋಜನೆಯಡಿ ಕೃಷಿ ಮಾರ್ಗಗಳ ಸೌರೀಕರಣ ಕಾರ್ಯವನ್ನು ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೊಳ್ಳಲಾಗಿದೆ. ಒಟ್ಟು 2767 MW ಸಾಮರ್ಥ್ಯದ ವಿಕೇಂದ್ರೀಕೃತ ಸೌರ ಯೋಜನೆಗಳ ಅನುಷ್ಠಾನಕ್ಕಾಗಿ ಕಾರ್ಯಾದೇಶ ನೀಡಿದ್ದು, ಈವರೆಗೆ 326 MW ಸಾಮರ್ಥ್ಯದ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಬಾಕಿ ಸಾಮರ್ಥ್ಯದ ಯೋಜನೆಗಳು ಪ್ರಗತಿಯಲ್ಲಿರುತ್ತವೆ.

ಮುಂದುವರೆದು, 2026-27ನೇ ಸಾಲಿನ ಆಯವ್ಯಯದಲ್ಲಿ “ಮುಖ್ಯಮಂತ್ರಿ ಸೌರ ಕೃಷಿ ಯೋಜನೆ” (CMSKY) ಎಂಬ ಹೊಸ ಯೋಜನೆಯನ್ನು KUSUM-C ಮಾದರಿಯಲ್ಲಿ ಜಾರಿಗೆ ತಂದಿದ್ದು, ಸದರಿ ಯೋಜನೆಯಡಿ RESCO ಮಾದರಿಯಲ್ಲಿ 3000 MW ಸಾಮರ್ಥ್ಯದ ವಿಕೇಂದ್ರೀಕೃತ ಸೌರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು.

ರಾಜ್ಯದಲ್ಲಿ ಸಮರ್ಪಕ ವಿದ್ಯುತ್ ಸರಬರಾಜಿಗಾಗಿ ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ (ಪ್ರಸರಣ ಮಾರ್ಗಗಳನ್ನೊಳಗೊಂಡಂತೆ), ಪ್ರತ್ಯೇಕ ಪ್ರಸರಣ ಮಾರ್ಗಗಳ ನಿರ್ಮಾಣ ಹಾಗೂ ಹಾಲಿ ಇರುವ ವಿದ್ಯುತ್ ಉಪಕೇಂದ್ರಗಳಲ್ಲಿನ ಶಕ್ತಿ ಪರಿವರ್ತಕಗಳ ಉನ್ನತೀಕರಣ/ಹೆಚ್ಚುವರಿ ಶಕ್ತಿ ಪರಿವರ್ತಕಗಳ ಅಳವಡಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular