BREAKING : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ಪಂಪ್ ಸೆಂಟ್ ಗಳಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ

ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಇಂದಿನಿಂದ ರೈತರ ಪಂಪ್ ಸೆಂಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಜೊತೆ ಪರಿಶೀಲನೆ ಸಭೆ ನಡೆದಿದ್ದು, ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ರೈತರ ಪಂಪ್ ಸೆಂಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡುತ್ತೇವೆ ಎಂದು ಈ ಹಿಂದೆಯೇ ಘೋಷಿಸಿದ್ದೆವು, ಅಂತೆಯೇ ಇಂದಿನಿಂದ ರೈತರ ಪಂಪ್ ಸೆಂಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಇಂಧನ ಇಲಾಖೆ ಜೊತೆ ಕಳೆದ ವಾರವೇ ಸಭೆ ನಡೆಸಿ ವಿದ್ಯುತ್ ನೀಡುವ ಬಗ್ಗೆ ನಿರ್ಧರಿಸಿದ್ದೇವೆ ಎಂದರು.

ಅದೇ ರೀತಿ ವಿದ್ಯುತ್ ಕೊರತೆ ನೀಗಿಸಲು ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಖರೀದಿ ಬಗ್ಗೆ ಇಂಧನ ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಉಂಟಾದ ವಿದ್ಯುತ್ ಕೊರತೆ ನೀಗಿಸಲು ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಖರೀದಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. . ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಚಾರ್ಜ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read