`ವಿಕಲಚೇತನ’ರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 4,000 ಹೆಚ್ಚುವರಿ `ಯಂತ್ರ ಚಾಲಿತ ದ್ವಿಚಕ್ರ ವಾಹನ’ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರ `ವಿಕಲಚೇತನ’ರಿಗೆ ಗುಡ್ ನ್ಯೂಸ್ ನೀಡಿದ್ದು, 4,000 ಹೆಚ್ಚುವರಿ `ಯಂತ್ರ ಚಾಲಿತ ದ್ವಿಚಕ್ರ ವಾಹನ’ ವಿತರಣೆ ಮಾಡಲು ನಿರ್ಧರಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ವೇಳೆ 4000 ಹೆಚ್ಚುವರಿ `ಯಂತ್ರ ಚಾಲಿತ ದ್ವಿಚಕ್ರ ವಾಹನ’ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ರೂ. 36 ಕೋಟಿ ಅಂದಾಜು ವೆಚ್ಚದಲ್ಲಿ 4,000 ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧರಿಸಲಾಗಿದೆ.

ರೂ.44 ಕೋಟಿ ವೆಚ್ಚದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಲೋಕಲ್ ಪ್ಲಾನಿಂಗ್ ಏರಿಯಾ ವ್ಯಾಪ್ತಿಯಲ್ಲಿನ ನಂಜನಗೂಡು ತಾಲ್ಲೂಕು ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ ಗ್ರಾಮಗಳ ಅಭಿವೃದ್ಧಿ ಕಾರ್ಯಗಳು ಮತ್ತು ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಅನುಷ್ಠಾನಕ್ಕೆ ತೀರ್ಮಾನ.ಗದಗ – ಬೆಟಗೇರಿ ನಗರಸಭೆಗೆ ಅಮೃತ 2.0 ಯೋಜನೆಯಡಿ ಅಂದಾಜು ರೂ. 34 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಕ್ಕೆ ಅನುಮತಿ.

ಅದೇ ರೀತಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಎಲ್ಲಾ ಸಗಟು ಗೋದಾಮುಗಳಿಗೆ ರೂ. 12 ಕೋಟಿ ವೆಚ್ಚದಲ್ಲಿ ಸಿ.ಸಿ.ಟಿ.ವಿ ಅಳವಡಿಕೆಗೆ ಕೆ.ಟಿ.ಟಿ.ಪಿ ಕಾಯ್ದೆಯನ್ವಯ ಟೆಂಡರ್ ಕರೆಯಲು ನಿರ್ಧಾರ.1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದ ಆಯ್ದ 17 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಸರ ಪರಿಹಾರ ನಿಧಿಯಡಿ ರೂ. 750 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಾಣ ಹಾಗೂ ಉನ್ನತೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read