ವಸತಿ ರಹಿತರಿಗೆ ಗುಡ್ ನ್ಯೂಸ್ ; ವಸತಿ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ

ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತ ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ದೇವರಾಜ ಅರಸು ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.ಅರ್ಜಿ ಸಲ್ಲಿಸಲು ಆ.15 ಕೊನೆಯ ದಿನವಾಗಿದೆ.

ಬೇಕಾದ ದಾಖಲೆ:

ಬಿಪಿಎಲ್ ಪಡಿತರಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅರ್ಜಿದಾರರ ಆಧಾರ್ಕಾರ್ಡ್ ಮತ್ತು ಕುಟುಂಬದವರ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪುರಸಭೆ ವ್ಯಾಪ್ತಿಯಲ್ಲಿ ಹೊಂದಿದ ಖಾಲಿ ನಿವೇಶನದ ಪ್ರಸಕ್ತ ಸಾಲಿನ ನಮೂನೆ 3ರ ನಕಲು ಪ್ರತಿ, ಕ್ರಯಪತ್ರ ದಾನಪತ್ರದ ನಕಲು ಪ್ರತಿಗಳು ಹಾಗೂ ಪ್ರಸಕ್ತ ಸಾಲಿನಲ್ಲಿ ಇರುವಂತೆ ಇ.ಸಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಾರ್ಯಾಲಯ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read