HomeKarnatakaರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಮಾಜಿ ದೇವದಾಸಿ ಮಹಿಳೆಯರ ನಿವೇಶನ ಹೊಂದಿರುವ ವಸತಿ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ದೇವದಾಸಿ ಪುನರ್ವಸತಿ ಯೋಜನೆಯಡಿ ಬಳ್ಳಾರಿ ಜಿಲ್ಲೆಯ ನಗರ ಪ್ರದೇಶಗಳಿಗೆ 10 ಫಲಾನುಭವಿಗಳಿಗೆ ಘಟಕದ ವೆಚ್ಚ ರೂ.20 ಲಕ್ಷಗಳಂತೆ, ಗ್ರಾಮೀಣ ಪ್ರದೇಶಗಳಿಗೆ 22 ಫಲಾನುಭವಿಗಳಿಗೆ ಘಟಕದ ವೆಚ್ಚ ರೂ.38.50 ಲಕ್ಷಗಳಂತೆ ಸಹಾಯಧನದಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗುವುದು.ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಪೂರಕ ದಾಖಲೆಗಳೊಂದಿಗೆ ಅರ್ಜಿಗಳನ್ನು ಇದೇ ಕಚೇರಿಗೆ ಅ.30 ವರೆಗೆ ಸಲ್ಲಿಸಬಹುದಾಗಿದೆ.

ಬೇಕಾದ ದಾಖಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆರ್.ಡಿ.ನಂಬರ್ ಹೊಂದಿರಬೇಕು), ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಭಾವಚಿತ್ರ-4, ನಿವೇಶನ ಖಾತಾ ಉತ್ತಾರ, ಆಧಾರ್ ಕಾರ್ಡ್ ಪ್ರತಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ನಂಬರ್, ಗ್ರಾಮ ಪಂಚಾಯತಿ ವತಿಯಿಂದ ವಸತಿ ಸೌಲಭ್ಯ ಪಡೆದಿರುವುದಿಲ್ಲವೆಂಬ ದೃಢೀಕರಣ ಪತ್ರ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಎಸ್ಪಿ ವೃತ್ತದ ಬಳಿಯ ದೇವಿನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳಮ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್ಕುಮಾರ್ ಅವರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular