HomeLatest Newsರಾಜ್ಯದ ಮಡಿವಾಳ ಮಾಚಿದೇವ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

ರಾಜ್ಯದ ಮಡಿವಾಳ ಮಾಚಿದೇವ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ.

ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳಲ್ಲಿ ಬರುವ ಮಡಿವಾಳ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-2 ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ. 3 ಲಕ್ಷ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.

ಈ ಯೋಜನೆಗಳಡಿಯಲ್ಲಿ ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿ ಮಡಿವಾಳ ಮತ್ತು ಇದರ ಉಪ ಜಾತಿಗಳಾದ ಅಗಸ, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಡನ್ ಮತ್ತು ಸಾಕಲವಾಡು ಜಾತಿಗಳಿಗೆ ಸೇರಿದವರಾಗಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-2ಎ ಯಲ್ಲಿ ಬರುವ ಮಡಿವಾಳ ಜಾತಿಗೆ ಸೇರಿದ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾರ್ಚ್ 6 ಕೊನೆ ದಿನವಾಗಿದೆ.

ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವೆಬ್‍ಸೈಟ್ www.kmmdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004 ಮತ್ತು 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08272-221656 ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular