ರಾಜ್ಯ ಸರ್ಕಾರದಿಂದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್ : ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸೌಲಭ್ಯ ಪಡೆಯಲು ಇಚ್ಛಿಸುವವರು ಆನ್ಲೈನ್ ಮೂಲಕ ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬೇಕು (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ).

ಅರ್ಹತೆ:
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವಿವಿಧ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆ ಜೋಡಣೆ ಮಾಡಿರಬೇಕು. ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡ್ ಮಾಡಿಸಿರಬೇಕು.

ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರು (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ).

ವಿಶೇಷ ಸೂಚನೆ
ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರು.

2023-24, 2024-25 ನೇ ಸಾಲಿನ ನಿಗದಿತ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಅರ್ಜಿ ಹಾಕಬಾರದು. ಸರ್ಕಾರ ಮತ್ತು ನಿಗಮ ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ ಮತ್ತು ನಿಬಂಧನೆಗಳನ್ನು ಹೊಂದಿದವರಾಗಿರಬೇಕು.ಹೆೆಚ್ಚಿನ ಮಾಹಿತಿಗಾಗಿ ನಗರದ ಆನಂತಪುರ ರಸ್ತೆ, ಜಿಲ್ಲಾಢಳಿತ ಭವನ, ಬಿ ಬ್ಲಾಕ್ 2ನೇ ಮಹಡಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ. ಹೊನ್ನೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read