‘ಅಲ್ಪಸಂಖ್ಯಾತರ ಸಮುದಾಯ’ಕ್ಕೆ ಗುಡ್ ನ್ಯೂಸ್ : ಸರಳ ವಿವಾಹಕ್ಕೆ 50,000 ‘ಪ್ರೋತ್ಸಾಹಧನ’ ಪಡೆಯಲು ಅರ್ಜಿ ಆಹ್ವಾನ

2025-26ನೇ ಸಾಲಿನ ಆಯವ್ಯಯ ಭಾಷಣದ “ಕಂಡಿಕೆ ಸಂಖ್ಯೆ: 222 ರಲ್ಲಿ ಘೋಷಿಸಿರುವಂತೆ” ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್,ಜೈನ್ ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ 50 ಸಾವಿರ ನೀಡುವ ಕಾರ್ಯಕ್ರಮವನ್ನು ನಿರ್ದೇಶನಾಲಯದಿಂದ ಅನುಷ್ಠಾನಗೊಳಿಸಲಾಗಿದೆ.

ಷರತ್ತುಗಳು: ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್,ಜೈನ್ ಸಿಖ್, ಬೌದ್ಧ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು, ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು.

ಈ ಯೋಜನಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ರೂ 2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ 5 ಲಕ್ಷಗಳನ್ನು ಮೀರತಕ್ಕದ್ದಲ್ಲ. ಈ ಸೌಲಭ್ಯವು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ.

ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡತಕ್ಕದ್ದು. ಜಿಲ್ಲಾ ನೋಂದಣಿ/ ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ಗಳು ದೇವಸ್ಥಾನದ ಟ್ರಸ್ಟ್ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂರ್ಪಕಿಸಬಹುದಾಗಿದೆ. ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂರ್ಪಿಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read