ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿಹಾಹಕ್ಕೆ ಪ್ರೋತ್ಸಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000/- ಐವತ್ತು ಸಾವಿರ (ಐವತ್ತು ಸಾವಿರ ರೂಪಾಯಿಗಳು) ನೀಡುವ ಸಲುವಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಹೊಂದಿರಬೇಕು. ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ರೂ.2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ.5.00 ಲಕ್ಷಗಳನ್ನು ಮೀರಿರಬಾರದು.
ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸಬಹುದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿ.ವಿ ಗೋಪುರ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560 001 ಅಥವಾ ದೂರವಾಣಿ ಸಂಖ್ಯೆ: 080-22866718 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
