ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಉತ್ತೇಜನ ನೀಡುವುದರ ಜೊತೆಗೆ ಆರ್ಥಿಕ ಹೊರೆಯನ್ನು ತಗ್ಗಿಸಬೇಕೆಂಬ ಉದ್ದೇಶದಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ ರೂ. 50 ಸಾವಿರ ನೀಡಲಾಗುವುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಸೌಲಭ್ಯದ ಪ್ರಯೋಜನ ಪಡೆಯಲು ಷರತ್ತುಗಳು
- ಅರ್ಜಿ ಸಲ್ಲಿಸುವ ವಧು ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತ ಸಮುದಾಯದವರಾಗಿರಬೇಕು
- ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು
- ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18, ಗರಿಷ್ಠ 42 ವರ್ಷ ಹಾಗೂ ವರನಿಗೆ ಕನಿಷ್ಠ 21, ಗರಿಷ್ಠ 45 ವರ್ಷ ವಯಸ್ಸಿನವರಾಗಿರಬೇಕು
- ವಧು-ವರರ ವಾರ್ಷಿಕ ಆದಾಯ ರೂ.2.50ಲಕ್ಷ ಮತ್ತು ಇಬ್ಬರ ಒಟ್ಟು ಆದಾಯ 5 ಲಕ್ಷ ಮೀರುವಂತಿಲ್ಲ
- ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಹಾಗೂ ವಧುವಿಗೆ ಜೀವಂತ ಪತಿಯಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಥವಾ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಡಿ