GOOD NEWS : ರಾಜ್ಯ ಸರ್ಕಾರದಿಂದ ‘ಅಲೆಮಾರಿ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸೌಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿ ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಅಥವಾ ಸಮಾಜ ಕಲ್ಯಾಣ ಇಲಾಖಾ ವೆಬ್‍ಸೈಟ್ (https://swd.karnataka.gov.in/) ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9480843157 ನ್ನು ಸಂಪರ್ಕಿಸಬಹುದಾಗಿದೆ.

ಸ್ವಯಂ-ಉದ್ಯೋಗ (ನೇರಸಾಲ) ಯೋಜನೆ (ಘಟಕ ವೆಚ್ಚ ರೂ. 1 ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ. 2 ಲಕ್ಷ), ಉದ್ಯಮಶೀಲತಾ ಯೋಜನೆ (ಸರಕು ಸಾಗಾಣಿಕೆ/ ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ)(ಘಟಕ ವೆಚ್ಚ ರೂ. 4 ಲಕ್ಷ), ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಪೊನ್ನಂಪೇಟೆ ತಾಲ್ಲೂಕು ಹಾಗೂ ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಗೆ ಬರುವ ಫಲಾನುಭವಿಗಳು ಸಂಬಂಧಿಸಿದ ದಾಖಲಾತಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ವಿರಾಜಪೇಟೆ ತಾಲ್ಲೂಕು ಇಲ್ಲಿಗೆ ಸಲ್ಲಿಸಬೇಕು ಎಂದು ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read