HomeKarnatakaಅಲೆಮಾರಿ - ಅರೆ ಅಲೆಮಾರಿ ಜನಾಂಗದವರಿಗೆ ಗುಡ್‌ ನ್ಯೂಸ್; ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ...

ಅಲೆಮಾರಿ – ಅರೆ ಅಲೆಮಾರಿ ಜನಾಂಗದವರಿಗೆ ಗುಡ್‌ ನ್ಯೂಸ್; ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯ ಪಡೆಯಲು ಇಚ್ಛಿಸುವವರಿಂದ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ಅರ್ಜಿ ಆಹ್ವಾನಿಲಾಗಿದೆ.

ನಿಗಮದ ಯೋಜನೆಗಳ ವಿವರ: ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ).

ಅರ್ಹತೆಗಳು: ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಅಲೆಮಾರಿ, ಅರೆ ಅಲೆಮಾರಿ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ನ.03 ಕೊನೆಯ ದಿನವಾಗಿದೆ (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಗಳು). ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಡಿ ಅರ್ಜಿಯನ್ನು ಸಲ್ಲಿಸಬಹುದು.

ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kaad.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂ.080-22374832 ಹಾಗೂ ಮೊ.8050770004, 8050770005 ನಿಂದ ಪಡೆಯಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular