HomeLatest Newsಬೆಂಗಳೂರು ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಆರೋಗ್ಯ ಸೇವೆ ನೀಡಲು ಜಿಬಿಎ ವ್ಯಾಪ್ತಿಗೂ ‘ಗೃಹ...

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಆರೋಗ್ಯ ಸೇವೆ ನೀಡಲು ಜಿಬಿಎ ವ್ಯಾಪ್ತಿಗೂ ‘ಗೃಹ ಆರೋಗ್ಯ’ ವಿಸ್ತರಣೆ

ಬೆಂಗಳೂರು: ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆ ಮಾಡಿ, ಔಷಧ ವಿತರಿಸುವ ಗೃಹ ಆರೋಗ್ಯ ಯೋಜನೆಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೂ ವಿಸ್ತರಿಸಲು ಮುಂದಾಗಿದ್ದೇವೆ. ಈ ಸಂಬಂಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದ್ದು, ಯೋಜನೆಯಡಿ ತಪಾಸಣೆ ಜೊತೆಗೆ ಔಷಧವನ್ನೂ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ಗೃಹ ಆರೋಗ್ಯ ಯೋಜನೆಯಡಿ, ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ಸೇರಿದಂತೆ ಮಾನಸಿಕ ಕಾಯಿಲೆಗಳ ಬಗ್ಗೆ ತಪಾಸಣೆ ನಡೆಸಲಾಗುತ್ತದೆ. ಆರೋಗ್ಯ ಸೇವೆಗಳನ್ನು ಬಡ ವರ್ಗದ ಜನರ ಬಳಿಗೆ ತರುವಲ್ಲಿ ಈ ಯೋಜನೆ ದೊಡ್ಡ ಬದಲಾವಣೆಯನ್ನು ತರಲಿದೆ ಎಂದು ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular