ಬೆಂಗಳೂರು: ಸಾರ್ವಜನಿಕರ ಹಿತ ದೃಷ್ಟಿಯಿಂದ ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯ ಅಗತ್ಯವಿದ್ದು, ಶೀಘ್ರದಲ್ಲಿಯೇ ಜಾರಿಗೆ ತರಲಾಗುವುದು. ಈ ನಿಟ್ಟಿನಲ್ಲಿ ತಜ್ಞರ ತಂಡ ವರದಿ ಸಿದ್ದಪಡಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಎರಡು -ಮೂರು ವಾರದಲ್ಲಿ ತಜ್ಞರ ತಂಡದ ವರದಿ ಸಲ್ಲಿಕೆಯಾಗಲಿದೆ. ಬಿಬಿಎಂಪಿ ಅಡಿ ನಗರದ ಆಸ್ಪತ್ರೆಗಳ ಕಟ್ಟಡ ನಿರ್ಮಾಣ, ನಿರ್ವಹಣೆ ಆಗುತ್ತಿದ್ದರೆ, ವೈದ್ಯಕೀಯ ಇಲಾಖೆಯಿಂದ ವೈದ್ಯರು, ಸಿಬ್ಬಂದಿ ಇರುತ್ತಿದ್ದರು. ಇದರಿಂದ ಸಾಕಷ್ಟು ಗೊಂದಲ ಉಂಟಾಗಿ ಕಾರ್ಯವೈಖರಿ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ತಪ್ಪಿಸಲು ಹಾಗೂ ನಗರದ ಜನತೆಯ ಹಿತದೃಷ್ಟಿಯಿಂದ ಪ್ರತ್ಯೇಕ ಆರೋಗ್ಯ ನೀತಿ ರೂಪಿಸಲಾಗುವುದು ಎಂದು ಹೇಳಿದ್ದಾರೆ.