HomeLatest Newsಬೆಂಗಳೂರು ಜನತೆಗೆ ಗುಡ್ ನ್ಯೂಸ್: ಪ್ರತ್ಯೇಕ ಆರೋಗ್ಯ ನೀತಿ ಜಾರಿ ಶೀಘ್ರ

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಪ್ರತ್ಯೇಕ ಆರೋಗ್ಯ ನೀತಿ ಜಾರಿ ಶೀಘ್ರ

ಬೆಂಗಳೂರು: ಸಾರ್ವಜನಿಕರ ಹಿತ ದೃಷ್ಟಿಯಿಂದ ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯ ಅಗತ್ಯವಿದ್ದು, ಶೀಘ್ರದಲ್ಲಿಯೇ ಜಾರಿಗೆ ತರಲಾಗುವುದು. ಈ ನಿಟ್ಟಿನಲ್ಲಿ ತಜ್ಞರ ತಂಡ ವರದಿ ಸಿದ್ದಪಡಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಎರಡು -ಮೂರು ವಾರದಲ್ಲಿ ತಜ್ಞರ ತಂಡದ ವರದಿ ಸಲ್ಲಿಕೆಯಾಗಲಿದೆ. ಬಿಬಿಎಂಪಿ ಅಡಿ ನಗರದ ಆಸ್ಪತ್ರೆಗಳ ಕಟ್ಟಡ ನಿರ್ಮಾಣ, ನಿರ್ವಹಣೆ ಆಗುತ್ತಿದ್ದರೆ, ವೈದ್ಯಕೀಯ ಇಲಾಖೆಯಿಂದ ವೈದ್ಯರು, ಸಿಬ್ಬಂದಿ ಇರುತ್ತಿದ್ದರು. ಇದರಿಂದ ಸಾಕಷ್ಟು ಗೊಂದಲ ಉಂಟಾಗಿ ಕಾರ್ಯವೈಖರಿ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ತಪ್ಪಿಸಲು ಹಾಗೂ ನಗರದ ಜನತೆಯ ಹಿತದೃಷ್ಟಿಯಿಂದ ಪ್ರತ್ಯೇಕ ಆರೋಗ್ಯ ನೀತಿ ರೂಪಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular