GOOD NEWS : ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಗುಡ್ ನ್ಯೂಸ್ : ನಾಳೆ ಸರ್ಕಾರದಿಂದ 32 ಹೊಸ ಆಂಬುಲೆನ್ಸ್ ಲೋಕಾರ್ಪಣೆ

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ತುರ್ತು ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಸಕಾಲದಲ್ಲಿ ಚಿಕಿತ್ಸೆಯನ್ನು ಖಾತ್ರಿಪಡಿಸಲು ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ 32 ನೂತನ ಆಂಬುಲೆನ್ಸ್ಗಳನ್ನು ನಾಳೆ ಜನ ಸೇವೆಗೆ ಅರ್ಪಿಸಲಾಗುತ್ತಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ತುರ್ತು ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಸಕಾಲದಲ್ಲಿ ಚಿಕಿತ್ಸೆಯನ್ನು ಖಾತ್ರಿಪಡಿಸಲು ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ 32 ನೂತನ ಆಂಬುಲೆನ್ಸ್ಗಳನ್ನು ನಾಳೆ ಜನ ಸೇವೆಗೆ ಅರ್ಪಿಸಲಾಗುತ್ತಿದೆ . ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರ ಆರೋಗ್ಯ ಮಟ್ಟ ಸುಧಾರಿಸುವ ಹಲವು ಯೋಜನೆಗಳು ಜಾರಿಗೊಂಡಿದೆ. ಜೊತೆಗೆ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಆಸ್ಪತ್ರೆ, ಕಟ್ಟಡಗಳ ನವೀಕರಣ ಸೇರಿದಂತೆ ಹೊಸ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸುವ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಈ ಮೂಲಕ ಕಲ್ಯಾಣದಲ್ಲಿ ಕಲ್ಯಾಣ ಕಾರ್ಯಗಳು ಆರಂಭಗೊಂಡಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read