ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಗುಡ್ ನ್ಯೂಸ್ : ಜನಸಂಖ್ಯೆ ಆಧಾರದ ಮೇಲೆ ‘ಸರ್ಕಾರಿ ಹುದ್ದೆ’ಗಳಿಗೆ ಮಂಜೂರಾತಿ

ಬೆಂಗಳೂರು : ಜನಸಂಖ್ಯೆ ಹಾಗೂ ಭೌಗೋಳಿಕ ಪ್ರದೇಶವನ್ನು ಆಧಾರವಾಗಿಟ್ಟುಕೊಂಡು ಅರಣ್ಯ ಇಲಾಖೆಯ ಹುದ್ದೆಗಳಿಗೆ ಮಂಜೂರಾತಿ ನೀಡಬೇಕು ಎಂದು ನೌಕರ ಬೇಡಿಕೆ ಇದೆ. ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಕಲಬುರಗಿ ನಗರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ) ಕಲಬುರಗಿ ವತಿಯಿಂದ ಆಯೋಜಿಸಲಾದ 2024ನೆ ಸಾಲಿನ ದಿನಾಚರಿ ಹಾಗೂ ದಿನದರ್ಶಿಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಮಾತ್ರ ಅರಣ್ಯ ಪ್ರಮಾಣ ಶೇ 5ಕ್ಕಿಂತ ಹೆಚ್ಚಿದೆ. ಬೇಸಿಗೆ ಕಾಲದಲ್ಲಿ ಕಲಬುರಗಿ ಜಿಲ್ಲೆಯ ತಾಪಮಾನ 45-46 ಡಿಗ್ರಿ ಸೆಲ್ಸಿಯಸ್ಗೆ ತಲುಪುತ್ತದೆ. ಕೆಲವೇ ವರ್ಷಗಳಲ್ಲಿ ಅದು 50 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಆದ್ದರಿಂದ ಹಸಿರು ಹೊದಿಕೆ ಹೆಚ್ಚಿಸಬೇಕಾಗಿದೆ. ನಾವು ಹವಾಮಾನ ಬದಲಾವಣೆಯ ಸವಾಲನ್ನು ಎದುರುಗೊಂಡಿದ್ದೇವೆ. ಪ್ರಕೃತಿ ಮೇಲೆ ಮನುಷ್ಯನಿಂದ ನಿರಂತರ ದೌರ್ಜನ್ಯ ನಡೆಯುತ್ತಿದೆ. ಆಧುನಿಕ ಜೀವನಶೈಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ವಿಷ ಸೇವಿಸುವ ಕಾಲಕ್ಕೆ ಸಾಕ್ಷಿಯಾಗುವ ಕಾಲ ದೂರವಿಲ್ಲ. ಕೊರೊನಾ ವೇಳೆ ಆಮ್ಲಜನಕದ ಬೇಡಿಕೆ ಪ್ರಕೃತಿಯ ಮಹತ್ವವನ್ನು ಮನಗಾಣಿಸಿದೆ. ಆದರೂ ನಾವು ಪಾಠ ಕಲಿತಿಲ್ಲ ಎಂದರು.

ಅರಣ್ಯ ಪ್ರಮಾಣ ಆಧರಿಸಿ ಹುದ್ದೆಗಳಿಗೆ ಮಂಜೂರಾತಿ ನೀಡುತ್ತಿರುವ ಕಾರಣ ಕಲ್ಯಾಣ ಕರ್ನಾಟಕ ಭಾಗದವರಿಗೆ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಅನ್ಯಾಯವಾಗುತ್ತಿದೆ. ಜನಸಂಖ್ಯೆ ಹಾಗೂ ಭೌಗೋಳಿಕ ಪ್ರದೇಶವನ್ನು ಆಧಾರವಾಗಿಟ್ಟುಕೊಂಡು ಅರಣ್ಯ ಇಲಾಖೆಯ ಹುದ್ದೆಗಳಿಗೆ ಮಂಜೂರಾತಿ ನೀಡಬೇಕು ಎಂದು ನೌಕರ ಬೇಡಿಕೆ ಇದೆ. ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಇ ವೇದಿಕೆ ಮುಖಾಂತರ ಭರವಸೆ ನೀಡುತ್ತೇನೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read