ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಗೆ 1826 ಕೋಟಿ ರೂ. ವೆಚ್ಚದಲ್ಲಿ ಜವಳಿ ಪಾರ್ಕ್ ಸ್ಥಾಪನೆ

ಬೆಂಗಳೂರು: ಕಲಬುರಗಿಯಲ್ಲಿ ಪಿಎಂ ಮಿತ್ರ ಯೋಜನೆಯಡಿ 1826 ಕೋಟಿ ರೂ. ವೆಚ್ಚದಲ್ಲಿ ಜವಳಿ ಪಾರ್ಕ್ ಸ್ಥಾಪನೆ ಸಂಬಂಧ ವಿವಿಧ ಇಲಾಖೆಗಳ ಅನುಮೋದನೆ ಪಡೆಯಲಾಗುತ್ತಿದೆ. ಕಾಲಮಿತಿಯೊಳಗೆ ಜವಳಿ ಪಾರ್ಕ್ ಸ್ಥಾಪಿಸಲಾಗುವುದು. ಇದರಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಕಲಬುರಗಿ ಜಿಲ್ಲೆ ನದಿ ಸಿನ್ನೂರು ಮತ್ತು ಕಿರಣಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ಸಾವಿರ ಎಕರೆ ಜಮೀನನ್ನು ಜವಳಿ ಪಾರ್ಕ್ ಸ್ಥಾಪನೆಗೆ ಸಾಂಕೇತಿಕ ದರದಲ್ಲಿ 99 ವರ್ಷಗಳ ಅವಧಿಗೆ ಈಗಾಗಲೇ ಹಸ್ತಾಂತರ ಮಾಡಲಾಗಿದೆ. ಪಾರ್ಕ್ ಗೇಟ್ ವರೆಗೆ ಸೌಲಭ್ಯ ಕಲ್ಪಿಸಲು ಸರ್ಕಾರ 390 ಮಂಜೂರಾತಿ ನೀಡಿದೆ. ಈ ಜವಳಿ ಪಾರ್ಕ್ ಸ್ಥಾಪನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read