HomeLatest Newsಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: 3 ಸಾವಿರ ಉದ್ಯೋಗ ಸೃಷ್ಟಿಯ 600 ಕೋಟಿ ರೂ....

ಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: 3 ಸಾವಿರ ಉದ್ಯೋಗ ಸೃಷ್ಟಿಯ 600 ಕೋಟಿ ರೂ. ವೆಚ್ಚದ ನೈಡೆಕ್ ನೂತನ ಘಟಕಕ್ಕೆ ಚಾಲನೆ

ಧಾರವಾಡ: ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಿರುವ ನೂತನ ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಉದ್ಘಾಟಿಸಿದರು.

ಜಪಾನ್ ಮತ್ತು ಫ್ರೆಂಚ್ ತಂತ್ರಜ್ಞಾನದ ಸಂಯೋಗವಿರುವ ಈ ಘಟಕವು 800 ಜನರಿಗೆ ನೇರ ಉದ್ಯೋಗ ನೀಡಲಿದೆ. ಕಂಪನಿಯ ಬ್ಯಾಟರಿ ಸೊಲ್ಯೂಷನ್ ಸ್ಥಾವರಕ್ಕೆ 20 ಎಕರೆ ಭೂಮಿ ಕೊಡಲಾಗಿದೆ. ಇಲ್ಲಿ ತಯಾರಾಗುವ 2, 3 ಮತ್ತು 4 ಮೆಗಾವ್ಯಾಟ್ ಸಾಮರ್ಥ್ಯದ ಹೆವಿ ಡ್ಯೂಟಿ ಮಶೀನ್ ಗಳು ಡೇಟಾ ಸೆಂಟರ್ ಉದ್ಯಮದ ಅಗತ್ಯ ಪೂರೈಸಲಿದೆ. ಈ ಸಾಧನಗಳನ್ನು ಅಮೆರಿಕ ಮತ್ತು ಯೂರೋಪ್ ಗೆ ರಫ್ತು ಮಾಡಲಾಗುವುದು. ಘಟಕವು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆ ಆರಂಭಿಸಿದರೆ 3,000 ಉದ್ಯೋಗ ಸೃಷ್ಟಿ ಆಗಲಿದೆ ಅವರು ತಿಳಿಸಿದ್ದಾರೆ.

ಧಾರವಾಡ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಈ ಕಾರ್ಖಾನೆ ಸ್ಥಾಪಿಸಲಾಗಿದೆ. ಈ ಘಟಕದಲ್ಲಿ ಡೇಟಾ ಸೆಂಟರ್ ಉದ್ಯಮಕ್ಕೆ ಬೇಕಾದ ಪವರ್ ಬ್ಯಾಕಪ್ ಜನರೇಟರ್, ವಿಂಡ್ ಜನರೇಟರ್, ಬ್ಯಾಟರಿ ಸ್ಟೋರೇಜ್, ವಿದ್ಯುತ್ ಚಾಲಿತ ದ್ವಿಚಕ್ರ, ತ್ರಿಚಕ್ರ ಮತ್ತು ಬಸ್ ಇವುಗಳಿಗೆ ಬೇಕಾದ ಸಾಧನಗಳನ್ನು ಉತ್ಪಾದಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಸರ್ಕಾರವು ಉತ್ತರ ಕರ್ನಾಟಕದ ಭಾಗಗಳಲ್ಲೂ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡಿದೆ. ಇದಕ್ಕಾಗಿ ಹೊಸ ಕೈಗಾರಿಕಾ ನೀತಿಯಲ್ಲಿ ಹಲವು ರಿಯಾಯಿತಿ ಮತ್ತು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ನೈಡೆಕ್ ಕಂಪನಿಯ ಈ ಯೋಜನೆಗೆ ಕೇವಲ ಎರಡು ವರ್ಷಗಳಲ್ಲಿ ಭೂಮಿ ಮಂಜೂರು ಮಾಡಿ, ತ್ವರಿತವಾಗಿ ಅನುಷ್ಠಾನಕ್ಕೆ ಬರುವಂತೆ ಮಾಡಿದೆ ಎಂದು ಅವರು ವಿವರಿಸಿದ್ದಾರೆ.

ಕೃಷ್ಣಾ ನ್ಯಾಯಾಧಿಕರಣವು ಕೈಗಾರಿಕಾ ಅಗತ್ಯಗಳ ಬಳಕೆಗೆ 4 ಟಿಎಂಸಿ ನೀರನ್ನು ಮೀಸಲಿಟ್ಟಿದೆ. ಇದರಲ್ಲಿ ನಾವು ಇದುವರೆಗೆ ಕೇವಲ ಅರ್ಧ ಟಿಎಂಸಿ ನೀರನ್ನು ಮಾತ್ರ ಬಳಸಿಕೊಂಡಿದ್ದೇವೆ. ಇದರಲ್ಲಿ ಇನ್ನೂ 3.5 ಟಿಎಂಸಿ ನೀರು ಹಾಗೆಯೇ ಇದೆ. ಇದರಲ್ಲಿ ನಾವು ರೈತರ ಪಾಲಿನ ನೀರನ್ನೇನೂ ಮುಟ್ಟಿಲ್ಲ. ಹಿಡಕಲ್ ಜಲಾಶಯದ ಕೆಳಭಾಗದ ನೀರನ್ನಷ್ಟೇ ಬಳಸಿಕೊಂಡಿದ್ದೇವೆ. ಕೈಗಾರಿಕೆಗಳು ಬೆಳೆಯಬೇಕು ಎಂದರೆ ನೀರು ಅತ್ಯಗತ್ಯ ಎಂದು ಅವರು ನುಡಿದಿದ್ದಾರೆ.

ಅತ್ಯಂತ ಮಹತ್ವಾಕಾಂಕ್ಷಿ ಮತ್ತು ಶ್ರೇಷ್ಠ ಕಾರ್ಖಾನೆಯು ಶೀಘ್ರವಾಗಿ ಪೂರ್ಣಗೊಂಡಿದೆ. ಫ್ರಾನ್ಸ್ ಜಪಾನ್ ಅವರ ಎಲ್ಲರ ಸಮಕ್ಷಮದಿಂದ ಇಂದು ಉದ್ಘಾಟನೆ ಮಾಡುತ್ತಿದ್ದೇವೆ. ಉತ್ತರ ಕರ್ನಾಟಕಕ್ಕೆ ಬಿಹ್ಯಾಂಡ್ ಬೆಂಗಳೂರು ತರ ಕೈಗಾರಿಕೆ ಬರಬೇಕು ಎಂದು ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಬೆಂಗಳೂರು ಸುತ್ತಮುತ್ತ ಸೇರಿ ಶೇಕಡ 75 ಬಂದಿದೆ. ಉತ್ತರ ಕರ್ನಾಟಕಕ್ಕೆ ಶೇಕಡ 45 ಪ್ರಪೋಸಲ್ ಬಂದಿದೆ. ಎಲ್ಲವನ್ನು ಸಹ ನಾವು ಗಮನಿಸುತ್ತಿದ್ದೇವೆ. 6 ಲಕ್ಷ ಜನರಿಗೆ ಉದ್ಯೋಗ ಸಿಗಬೇಕು ಎಂದು ಅತ್ಯಂತ ಗಂಭೀರವಾಗಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಉದ್ದಿಮೆಗಳಿಗೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಾಗ ರೈತರಿಗೆ ತಕ್ಕ ಪರಿಹಾರ ಕೊಡಬೇಕಾಗುತ್ತದೆ. ನಾವು ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕಾದ ಅಗತ್ಯವಿದೆ ಎಂದು ಸಚಿವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಜಪಾನ್ ಕಾನ್ಸುಲ್ ಜನರಲ್ ನಕಾನೆ ಸುಟೋಮು, ಫ್ರಾನ್ಸ್ ಕಾನ್ಸುಲ್ ಜನರಲ್ ಮಾರ್ಕ್ ಲಾಮಿ, ಕಂಪನಿಯ ಹಿರಿಯ ಅಧಿಕಾರಿಗಳಾದ ಮೈಕೆಲ್ ಬ್ರಿಗ್ಸ್, ಗ್ರೆಗ್ ಗಾರ್ಮನ್, ಗಿರೀಶ್ ಕುಲಕರ್ಣಿ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular