HomeLatest Newsದೇಶದ ಜನತೆಗೆ ಗುಡ್ ನ್ಯೂಸ್: ಈ ತಿಂಗಳಾಂತ್ಯಕ್ಕೆ 'ಭಾರತ್ ಟ್ಯಾಕ್ಸಿ' ಸೇವೆ ಆರಂಭ

ದೇಶದ ಜನತೆಗೆ ಗುಡ್ ನ್ಯೂಸ್: ಈ ತಿಂಗಳಾಂತ್ಯಕ್ಕೆ ‘ಭಾರತ್ ಟ್ಯಾಕ್ಸಿ’ ಸೇವೆ ಆರಂಭ

ನವದೆಹಲಿ: ಜನವರಿ ಅಂತ್ಯದ ವೇಳೆಗೆ ಭಾರತ ಟ್ಯಾಕ್ಸಿ ಸೇವೆಯನ್ನು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಆರಂಭಿಸಲಾಗುವುದು.

ಕೇಂದ್ರ ಸಹಕಾರ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಂಕಜ್ ಕುಮಾರ್ ಬನ್ಸಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಹಕಾರ ವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತ್ ಟ್ಯಾಕ್ಸಿ ಆ್ಯಪ್ ಅನ್ನು ದೆಹಲಿಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ಇದನ್ನು ಸಹಕಾರ ಟ್ಯಾಕ್ಸಿ ಕೋ ಆಪರೇಟಿವ್ ಲಿಮಿಟೆಡ್ ನಿರ್ವಹಿಸುತ್ತಿದೆ. ಇದು ವ್ಯಾಪಕ ಜನ ಮೆಚ್ಚುಗೆಗೆ ಪಾತ್ರವಾಗಿದೆ. ಇದರಿಂದ ಅಧಿಕೃತ ಸೇವೆಗೆ ಈ ತಿಂಗಳ ಅಂತ್ಯದ ವೇಳೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

ಈ ಅಪ್ಲಿಕೇಶನ್ ನಲ್ಲಿ ಈಗಾಗಲೇ 1.4 ಲಕ್ಷಕ್ಕೂ ಹೆಚ್ಚು ಚಾಲಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular