ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ನಾಡಿನ ಗ್ರಾಮೀಣ ಭಾಗದ ಜನರ ಹೆಚ್ಚಿನ ಅನುಕೂಲಕ್ಕಾಗಿ ಒಂದೇ ಸೂರಿನಡಿಯಲ್ಲಿ ಎಲ್ಲಾ ಸೇವೆಗಳನ್ನು ಕಲ್ಪಿಸಲು ಮುಂದಾಗಿದೆ. ಇದೀಗ ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಆರಂಭಿಸಿದ್ದು, ಜನರಿಗೆ ಮತ್ತಷ್ಟು ಅನುಕೂಲ ಆಗಲಿದೆ.
ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈಗ ಜನನ – ಮರಣ ಪ್ರಮಾಣಪತ್ರ ಪಡೆಯುವುದು ಇನ್ನಷ್ಟು ಸುಲಭವಾಗಿದೆ.
""ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಆರಂಭ"
ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ನಮ್ಮ ಸರ್ಕಾರ ಆದೇಶಿಸಿದೆ.
ಈಗ ಜನನ – ಮರಣ… pic.twitter.com/RS3tZqp123
— Siddaramaiah (@siddaramaiah) March 16, 2024


