ಚಿಕ್ಕಮಗಳೂರು: ರಾಜ್ಯಕ್ಕೆ 10 ವಂದೇ ಭಾರತ್ ರೈಲುಗಳು ಶೀಘ್ರವೇ ಬರಲಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಚಿಕ್ಕಮಗಳೂರು ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಚಿಕ್ಕಮಗಳೂರು -ತಿರುಪತಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿ, 1000 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಪ್ರಮುಖ ರೈಲು ನಿಲ್ದಾಣಗಳನ್ನು ಮೆಲ್ದರ್ಜೆಗೇರಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಬೀರೂರು -ಶಿವಮೊಗ್ಗ ಡಬ್ಲಿಂಗ್ ಕಾರ್ಯ ಶೀಘ್ರವೇ ಆರಂಭವಾಗಲಿದೆ. ಹಾಸನ –ಬೇಲೂರು- ಚಿಕ್ಕಮಗಳೂರು ರೈಲ್ವೆ ಮಾರ್ಗ ಇನ್ನೆರಡು ವರ್ಷದೊಳಗೆ ಮುಕ್ತಾಯವಾಗಲಿದ್ದು, ಚಿಕ್ಕಮಗಳೂರಿಗೆ ಹೆಚ್ಚಿನ ರೈಲುಗಳು ಸಂಚರಿಸುತ್ತವೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರು ರೈಲು ನಿಲ್ದಾಣದಲ್ಲಿಂದು ಚಿಕ್ಕಮಗಳೂರು-ತಿರುಪತಿ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿಗೆ (ರೈಲು ಸಂಖ್ಯೆ 17427) ಹಸಿರು ನಿಶಾನೆ ತೋರಲಾಯಿತು.
— V. Somanna (@VSOMANNA_BJP) July 11, 2025
ಈ ಸಂದರ್ಭದಲ್ಲಿ, ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು, ವಿಧಾನ ಪರಿಷತ್ ಉಪಸಭಾಪತಿಗಳಾದ ಶ್ರೀ ಎಂ.ಕೆ ಪ್ರಾಣೇಶ್ ಅವರು, ಶೃಂಗೇರಿಯ ಶಾಸಕರಾದ ಶ್ರೀ ಟಿ.ಡಿ ರಾಜೇಗೌಡ ಅವರು,… pic.twitter.com/gkG4UtdQ8M