ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯದಾದ್ಯಂತ 334 ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣ: ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.. 

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಯಡ್ವಣಿಯಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ₹30 ಕೋಟಿ ವೆಚ್ಚದಲ್ಲಿ ಶಾಲಾ ಸಂಕೀರ್ಣ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

ರಾಜ್ಯದಾದ್ಯಂತ 334 ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ₹217 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನ.

ರಾಜ್ಯದ 22 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ₹22 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

25 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಯನ್ನು 80 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹಾಗೂ ಗಂಡಸಿಯ ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ₹73.22 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

ಕಲಬುರಗಿ, ಗದಗ, ದಾವಣಗೆರೆ, ಮಂಗಳೂರು, ಬೆಂಗಳೂರು ಕೆಂಗೇರಿ ಸಮೀಪದ ಭೀಮನಕುಪ್ಪೆ ಮತ್ತು ಮೈಸೂರಿನಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳನ್ನು ₹452.89 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ.

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ತೀವ್ರ ನಿಗಾ ಘಟಕವನ್ನು ₹28.69 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ₹304 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ.

ಹೆಬ್ಬಾಳದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಆವರಣದಲ್ಲಿ ಕುರಿ ಮತ್ತು ಮೇಕೆಗಳ ನೀಲಿ ನಾಲಗೆ ರೋಗ ಹಾಗೂ ಇನ್ನಿತರೆ ರೋಗಗಳಿಗೆ ಲಸಿಕೆ ತಯಾರಿಸಲು ಅತ್ಯಾಧುನಿಕ ಲಸಿಕಾ ತಯಾರಿಕಾ ಪ್ರಯೋಗಾಲಯವನ್ನು ₹27 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ.

ಭಕ್ತರ ಹಳ್ಳಿ ಮತ್ತು ಕುಣಿಗಲ್ ತಾಲೂಕಿನ ಇತರೆ 21 ಕೆರೆಗಳನ್ನು ತುಂಬಿಸುವ ₹34 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.

ಹೇಮಾವತಿ ನದಿಯಿಂದ ನೀರನ್ನು ಎತ್ತಿ ಮಂಡ್ಯ ಜಿಲ್ಲೆಯ ಕೆ.ಆ‌ರ್.ಪೇಟೆ ಮತ್ತು ನಾಗಮಂಗಲ ತಾಲೂಕು ಹಾಗೂ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕುಗಳ ವಿವಿಧ ಕೆರೆಗಳನ್ನು ತು೦ಬಿಸುವ ₹67 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಮತ್ತು ಸುತ್ತಮುತ್ತಲಿನ ಗ್ರಾಮಗಳ 9,200 ಹೆಕ್ಟೇ‌ರ್ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ರೂಪಿಸಲಾದ ಚಡಚಣ ಏತನೀರಾವರಿ ಯೋಜನೆಯ ₹485 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

ಚಳ್ಳಕೆರೆ ನಗರಕ್ಕೆ ₹198 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read