ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ `ಜನನ-ಮರಣ’ ನೋಂದಣಿ ತಿದ್ದುಪಡಿ ಅಧಿಕಾರ ಎಸಿಗೆ

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಜನನ, ಮರಣ ನೋಂದಣಿಗೆ ಕೋರ್ಟ್ ಅಲೆಬೇಕಿಲ್ಲ.  ಜನನ, ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗಳಿಗೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಹೆಚ್.ಕೆ. ಪಾಟೀಲ್, ಜನನ ಹಾಗೂ ಮರಣ ನೋಂದಣಿಯಲ್ಲಿ ವಿಳಂಬ ನೋಂದಣಿ ಹಾಗೂ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗೆ ನೀಡಲಾಗಿದೆ. ಜನನ, ಮರಣ ನೋಂದಣಿ ನಿಯಮಗಳು-1999 ರ ನಿಯಮಗಳ ಪ್ರಕಾರ ವಿಳಂಬ ನೋಂದಣಿಗೆ ಸಾರ್ವಜನಿಕರು ಹಾಲಿ ಪಾವತಿಸುತ್ತಿರುವ ಶುಲ್ಕವನ್ನೂ ಪರಿಷ್ಕರಿಸಲಾಗಿದೆ. ಜನನ, ಮರಣ ಘಟಿಸಿದ 21 ದಿನಗಳ ನಂತರ ಹಾಗೂ 30 ದಿನಗಳ ಒಳಗಾಗಿ ನೋಂದಾಯಿಸುವ ವಿಳಂಬ ನೋಂದಣಿಗೆ ಹಾಲಿ ಇರುವ ವಿಳಂಬ ಶುಲ್ಕವನ್ನು 2 ರೂ. ಬದಲು 1000 ರೂ.ಗೆ 30 ದಿನಗಳ ನಂತರ 5 ರೂ. ಬದಲು 200 ರೂ. 1 ವರ್ಷ ಬಳಿಕ ನೋಂದಣಿಗೆ 10 ರೂ. ಬದಲು 500 ರೂ. ಶುಲ್ಕವನ್ನು ಪರಿಷ್ಕರಿಸಲಾಗಿದೆ.

ಈವರೆಗೆ ಜನನ, ಮರಣ ನೋಂದಣಿ ಕಾಯಿದೆ ಸೆಕ್ಷನ್ 12(3) ಅಡಿ ವಿಳಂಬ ತಿದ್ದುಪಡಿ ಸೇರಿದಂತೆ ಯಾವುದೇ ತಾಗದೆಗಳಿದ್ದರೂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಅಥವಾ ಪ್ರೆಸಿಡೆನ್ಸ್ ಮ್ಯಾಜಿಸ್ಟ್ರೇಟ್ ಮಾತ್ರ ಆದೇಶ ಹೊರಡಿಸಬಹುದಾಗಿದ್ದು, ಬೇರೆ ಯಾರಿಗೂ ಅಧಿಕಾರ ಇರಲಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read