ಬೆಂಗಳೂರು: ಉಚಿತ ನೇತ್ರ ತಪಾಸಣೆ, ಕಣ್ಣಿನ ಶಸ್ತ್ರಚಿಕಿತ್ಸೆ ಮತ್ತು ಕನ್ನಡಕಗಳನ್ನು ವಿತರಿಸುವ ಆಶಾಕಿರಣ ಯೋಜನೆಯನ್ನು ₹52.85 ಕೋಟಿ ವೆಚ್ಚದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅನುಷ್ಠಾಗೊಳಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
817 ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್‌ಗಳಿಗೆ ರೂ.78.43 ಕೋಟಿ ವೆಚ್ಚದಲ್ಲಿ ಅವಶ್ಯವಿರುವ ಔಷಧ ಖರೀದಿ ಮತ್ತು ಸರಬರಾಜು ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಶುಚಿ ಕಾರ್ಯಕ್ರಮದಡಿ ₹71.83 ಕೋಟಿ ವೆಚ್ಚದಲ್ಲಿ ಸ್ಯಾನಿಟರ್ ನ್ಯಾಪ್‌ಕಿನ್ ಪ್ಯಾಡ್‌ಗಳನ್ನು ಖರೀದಿಸಿ ವಿತರಣೆ ಮಾಡಲು ನಿರ್ಧರಿಸಲಾಗಿದ್ದು, ಉಚಿತ ನೇತ್ರ ತಪಾಸಣೆ, ಕಣ್ಣಿನ ಶಸ್ತ್ರಚಿಕಿತ್ಸೆ ಮತ್ತು ಕನ್ನಡಕಗಳನ್ನು ವಿತರಿಸುವ ಆಶಾಕಿರಣ ಯೋಜನೆಯನ್ನು ₹52.85 ಕೋಟಿ ವೆಚ್ಚದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅನುಷ್ಠಾಗೊಳಿಸಲು ತೀರ್ಮಾನಿಸಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ₹65 ಕೋಟಿ ವೆಚ್ಚದಲ್ಲಿ ಜಮೀನು ಖರೀದಿಗೆ ನಿರ್ಧರಿಸಲಾಗಿದೆ.
ರಾಯಚೂರು ನಗರದ ವಿವಿಧ ಕಡೆಗಳಲ್ಲಿ ₹25 ಕೋಟಿ ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ₹100 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ.
ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ನೂತನ 20 ವಿದ್ಯಾರ್ಥಿನಿಲಯಗಳನ್ನು ರಾಜ್ಯದ 14 ಜಿಲ್ಲೆಗಳಲ್ಲಿ ಒಟ್ಟು ₹15.45 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ನಿರ್ಧಾರ
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನೂತನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಕಟ್ಟಡ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ₹73.75 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025ಕ್ಕೆ ಘಟನೋತ್ತರ ಅನುಮೋದನೆ
ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ 2025ಕ್ಕೆ ಘಟನೋತ್ತರ ಅನುಮೋದನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕು ಆಸ್ಪತ್ರೆಯ ಆವರಣದಲ್ಲಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ನಿರ್ಮಾಣ ಕಾಮಗಾರಿಯನ್ನು ₹24.22 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.. #CabinetDecisions pic.twitter.com/6tjFKU6BU9
— Siddaramaiah (@siddaramaiah) September 4, 2025