ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೈಗ್ರೇನ್, ತಲೆನೋವು ಸೇರಿದಂತೆ ಮೆದುಳಿಗೆ ಸಂಬಂಧಪಟ್ಟ ಕಾಯಿಲೆಗೆ ಚಿಕಿತ್ಸೆ ನೀಡುವ ʼಬ್ರೈನ್ ಹೆಲ್ತ್ ಕ್ಲಿನಿಕ್ʼಗಳು ತಿಂಗಳಾಂತ್ಯಕ್ಕೆ ರಾಜ್ಯಾದ್ಯಂತ ಆರಂಭಿಸಲು ಸಿದ್ಧತೆ ನಡೆಸಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಜಿಲ್ಲೆಯಲ್ಲಿ ಈಗಾಗಲೇ ಯಶಸ್ಸು ಪಡೆದಿರುವ ʼಬ್ರೈನ್ ಹೆಲ್ತ್ ಕ್ಲಿನಿಕ್ʼಗಳನ್ನು ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲೂ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ. ʼನಿಮ್ಹಾನ್ಸ್ʼ ಸಹಯೋಗದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.
ಬುದ್ದಿಮಾಂದ್ಯತೆ, ಅಪಸ್ಮಾರ, ತಲೆನೋವಿನಂತರ ನರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಚಿಕಿತ್ಸೆ ಹಾಗೂ ಪಾರ್ಶ್ವ ವಾಯುವಿಗೆ ಗೋಲ್ಡನ್ ಅವರ್ ಚಿಕಿತ್ಸೆ ನೀಡಲಾಗುತ್ತದೆ.