HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ: ಪ್ರಮುಖ ಸಮಸ್ಯೆಗಳ ನಿವಾರಣೆ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ: ಪ್ರಮುಖ ಸಮಸ್ಯೆಗಳ ನಿವಾರಣೆ

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆಯಿಂದ ಪ್ರಮುಖ ಸಮಸ್ಯೆಗಳ ನಿವಾರಣೆ ಬಗ್ಗೆ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಇ-ಸ್ವತ್ತು ತಂತ್ರಾಂಶದ ಕಾರ್ಯನಿರ್ವಹಣೆ ಹಾಗೂ ಪ್ರಗತಿಯನ್ನು ಪರಿಶೀಲಿಸಲಾಯಿತು.

ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಾದ್ಯಂತ ಈವರೆಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಅಲ್ಲದೇ, ಹೊಸ ನಮೂನೆ 11ಬಿ ಗೆ ಸಂಬಂಧಿಸಿದಂತೆ ಈವರೆಗೆ 76,093 ಅರ್ಜಿಗಳು ಸ್ವೀಕೃತವಾಗಿವೆ. ಈ ಅರ್ಜಿಗಳು ವಿವಿಧ ಹಂತಗಳಲ್ಲಿ ಅನುಮೋದನೆಗೆ ಬಾಕಿ ಉಳಿದಿದ್ದು, ಈ ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡುವಲ್ಲಿ ಕ್ರಮವಹಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರು ಅರ್ಜಿಗಳನ್ನು ಅನುಮೋದನೆ ಮಾಡುವಂತಹ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳು ಹಾಗೂ ಸಲಹೆಗಳು ಬರುತ್ತಿದೆ. ಅದಕ್ಕೆ ಅನುಗುಣವಾಗಿ ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಈ ಕೆಳಗಿನ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

1. ನಮೂನೆ–11ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.

2. ಹೊಸ ಬಹುಮಹಡಿ (ಅಪಾರ್ಟ್‌ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.

3. ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಗುಂಟೆ ಮತ್ತು ಸೆಂಟ್ಸ್‌ನಲ್ಲಿರುವ ವಿಸ್ತೀರ್ಣವನ್ನು ಚ.ಮೀನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

4. ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಋಣಭಾರ ಪ್ರಮಾಣಪತ್ರಗಳನ್ನು (ಇಸಿ) ಸಲ್ಲಿಸಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.

5. ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸೇವ್ ಮಾಡಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.

6. ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್‌ಫೇಸ್‌ ಮೂಲಕ ಇ-ಖಾತಾಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇದ್ದ   ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

7. ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳೊಂದಿಗೆ ಮಾಡಲಾಗಿದ್ದ ಸಂಯೋಜನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.

8. ಇ-ಸ್ವತ್ತು ತಂತ್ರಾಂಶದ ಗ್ರಾಮ ಪಂಚಾಯತಿ ಬಳಕೆದಾರರ ಲಾಗಿನ್‌ನಲ್ಲಿ ಅರ್ಜಿಗಳ ಅನುಮೋದನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ ದಿನದೊಳಗೆ ಕ್ರಮವಹಿಸಲಾಗುವುದು. ಇ-ಸ್ವತ್ತು ತಂತ್ರಾಂಶದ ಬಳಕೆದಾರರ ಲಾಗಿನ್‌ನಲ್ಲಿ ಉಂಟಾಗುತ್ತಿರುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು.

ಸಾರ್ವಜನಿಕರು ಇ-ಸ್ವತ್ತು ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆ ಕಂಡುಬಂದಲ್ಲಿ ರಾಜ್ಯ ಸಹಾಯವಾಣಿ ಸಂಖ್ಯೆ 9483476000 ಅನ್ನು ಸಂಪರ್ಕಿಸಬಹುದು. ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆಗಳ ವಿವರ ಈ ಕೆಳಗಿನ ಲಿಂಕ್‌ಗಳಲ್ಲಿ ಲಭ್ಯವಿದೆ. 

https://eswathu.karnataka.gov.in/Login.aspx ಮತ್ತು https://panchatantra.karnataka.gov.in

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular