HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಬೆಂಗಳೂರು- ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಬೆಂಗಳೂರು- ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆ

ಬೆಂಗಳೂರು: ಬೆಂಗಳೂರು -ತುಮಕೂರು ಭಾಗದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ದಶಕಗಳ ಕನಸಾಗಿದ್ದ ಬೆಂಗಳೂರು -ತುಮಕೂರು ಮೆಟ್ರೋ ಮಾರ್ಗ ನಿರ್ಮಾಣ ಪ್ರಕ್ರಿಯೆಗೆ ಬಿಎಂಆರ್‌ಸಿಎಲ್ ವಿವರವಾದ ಯೋಜನಾ ವರದಿ ಡಿಪಿಆರ್ ಅನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.

ಬೆಂಗಳೂರು- ತುಮಕೂರು ಮೆಟ್ರೋ ಮಾರ್ಗದ ಡಿಪಿಆರ್ ಅನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಜಾರಿಯಾಗಲಿದೆ. ಮಾದಾವರ ನಿಲ್ದಾಣದಿಂದ ತುಮಕೂರಿನವರೆಗೆ ಹಸಿರು ಮಾರ್ಗದ 59.60 ಕಿಲೋಮೀಟರ್ ವಿಸ್ತರಣೆಗೆ ಬಿಎಂಆರ್ಸಿಎಲ್ ಯೋಜನಾ ವರದಿ ಸಿದ್ದಪಡಿಸಿ ಸರ್ಕಾರಕ್ಕೆ ಹಸ್ತಾಂತರ ಮಾಡಿದೆ.

ನೆಲಮಂಗಲ, ದಾಬಸ್ ಪೇಟೆ, ಕ್ಯಾತ್ಸಂದ್ರ ಮೂಲಕ ಹೊಸ ಕಾರಿಡಾರ್ ಹಾದು ಹೋಗಲಿದೆ. ಮಾದಾವರ, ಮಾಕಳಿ, ದಾಸನಪುರ, ನೆಲಮಂಗಲ, ವೀವರ್ಸ್ ಕಾಲೋನಿ, ವಿಶ್ವೇಶ್ವರಪುರ, ನೆಲಮಂಗಲ ಟೋಲ್ ಗೇಟ್, ಬೂದಿಹಾಳ, ಟಿ. ಬೇಗೂರು, ಮಹಿಮಾಪುರ, ಸೋಂಪುರ ಕೈಗಾರಿಕಾ ಪ್ರದೇಶ, ದಾಬಸ್ ಪೇಟೆ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ಬಸ್ ನಿಲ್ದಾಣ, ಶಿರಾ ಗೇಟ್ ವರೆಗೆ ನಿಲ್ದಾಣಗಳು ಇರಲಿವೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗಕ್ಕೆ 20,649 ಕೋಟಿ ರೂ. ವೆಚ್ಚವಾಗುವ ನೀರಿಕ್ಷೆ ಇದೆ. 2024- 25 ನೇ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರು. ಇದೀಗ ಡಿಪಿಆರ್ ಸಲ್ಲಿಕೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular