ಬೆಂಗಳೂರು: ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೂ ಸ್ವಾಧೀನಾನುಭವ ಪ್ರಮಾಣ ಪತ್ರ(ಒಸಿ) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.
ಮಹಾನಗರ ಪಾಲಿಕೆಗಳನ್ನು ಹೊರತುಪಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯಲ್ಲಿ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿದ ವಾಸದ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡಿದ್ದ ಸರ್ಕಾರ ಆ ವ್ಯಾಪ್ತಿಯನ್ನು ವಿಸ್ತರಿಸಿದೆ. ಮಹಾನಗರ ಪಾಲಿಕೆಗಳನ್ನು ಹೊರತುಪಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಿರ್ಮಿಸಲಾದ ನೆಲ ಪ್ಲಸ್ ಎರಡು ಅಂತಸ್ತು ಅಥವಾ ಸ್ಟೀಲ್ಟ್ ಪ್ಲಸ್ ಮೂರು ಅಂತಸ್ತಿನ ವಾಸದ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡಲಾಗಿದೆ. ಈ ಆದೇಶದಿಂದಾಗಿ 1200 ಚದರಡಿ ವಿಸ್ತೀರ್ಣದ ವಾಸದ ಕಟ್ಟಡಕ್ಕೆ ನೀರು, ವಿದ್ಯುತ್ ಸಂಪರ್ಕ ಸಿಗಲಿದೆ ಎಂದು ಹೇಳಲಾಗಿದೆ.
