HomeLatest Newsರಾಜ್ಯದ ಜನತೆಗೆ ಗುಡ್ ನ್ಯೂಸ್: ಸ್ಥಳೀಯ ಸಂಸ್ಥೆ ವ್ಯಾಪ್ತಿ ಕಟ್ಟಡಗಳಿಗೂ ಒಸಿ ವಿನಾಯಿತಿ ನೀಡಿ ಸರ್ಕಾರ...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸ್ಥಳೀಯ ಸಂಸ್ಥೆ ವ್ಯಾಪ್ತಿ ಕಟ್ಟಡಗಳಿಗೂ ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ

ಬೆಂಗಳೂರು: ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೂ ಸ್ವಾಧೀನಾನುಭವ ಪ್ರಮಾಣ ಪತ್ರ(ಒಸಿ) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.

ಮಹಾನಗರ ಪಾಲಿಕೆಗಳನ್ನು ಹೊರತುಪಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯಲ್ಲಿ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿದ ವಾಸದ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡಿದ್ದ ಸರ್ಕಾರ ಆ ವ್ಯಾಪ್ತಿಯನ್ನು ವಿಸ್ತರಿಸಿದೆ. ಮಹಾನಗರ ಪಾಲಿಕೆಗಳನ್ನು ಹೊರತುಪಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಿರ್ಮಿಸಲಾದ ನೆಲ ಪ್ಲಸ್ ಎರಡು ಅಂತಸ್ತು ಅಥವಾ ಸ್ಟೀಲ್ಟ್ ಪ್ಲಸ್ ಮೂರು ಅಂತಸ್ತಿನ ವಾಸದ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡಲಾಗಿದೆ. ಈ ಆದೇಶದಿಂದಾಗಿ 1200 ಚದರಡಿ ವಿಸ್ತೀರ್ಣದ ವಾಸದ ಕಟ್ಟಡಕ್ಕೆ ನೀರು, ವಿದ್ಯುತ್ ಸಂಪರ್ಕ ಸಿಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular