HomeLatest Newsರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯಾದ್ಯಂತ 4000ಕ್ಕೂ ಹೆಚ್ಚು ಅಂಗನವಾಡಿಗಳಲ್ಲಿ LKG, UKG ಆರಂಭ

ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯಾದ್ಯಂತ 4000ಕ್ಕೂ ಹೆಚ್ಚು ಅಂಗನವಾಡಿಗಳಲ್ಲಿ LKG, UKG ಆರಂಭ

ಬೆಂಗಳೂರು: ರಾಜ್ಯಾದ್ಯಂತ 4 ಸಾವಿರಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳಲ್ಲಿ ಅಕ್ಟೋಬರ್ ವೇಳೆಗೆ ಎಲ್‌ಕೆಜಿ, ಯುಕೆಜಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ಧರಿಸಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರತ್ಯೇಕ ಇಲಾಖೆಯಾಗಿ ಅಕ್ಟೋಬರ್ 2ಕ್ಕೆ 50 ವರ್ಷ ಪೂರ್ಣವಾಗುತ್ತಿದೆ. ಇದರ ಅಂಗವಾಗಿ ರಾಜ್ಯದ ನಾಲ್ಕು ಸಾವಿರಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ನಿರ್ಧರಿಸಲಾಗಿದೆ.

ಆಧುನಿಕತೆಗೆ ಅನುಗುಣವಾಗಿ ಮಕ್ಕಳ ಕಲಿಕೆಗೆ ಸ್ಮಾರ್ಟ್ ಟಿವಿ, ಕಲಿಕಾ ಪರಿಕರಗಳ ಖರೀದಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ಕೂಡ ನೀಡಲಾಗುತ್ತಿದೆ. ರಾಜ್ಯದಲ್ಲಿ 69 ಸಾವಿರ ಅಂಗನವಾಡಿ ಕೇಂದ್ರಗಳಿವೆ. ಪ್ರತಿ ಕೇಂದ್ರಗಳಲ್ಲಿಯೂ ತಲಾ ಒಬ್ಬರು ಕಾರ್ಯಕರ್ತೆಯರು, ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿದರೂ, ಪ್ರತ್ಯೇಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದಿಲ್ಲ. ಸದ್ಯ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರಲ್ಲಿ 17 ಸಾವಿರಕ್ಕೂ ಅಧಿಕ ಮಂದಿ ಪದವಿ ಪೂರ್ಣಗೊಳಿಸಿದವರಿದ್ದು, ಅವರ ಮೂಲಕವೇ ಮಕ್ಕಳಿಗೆ ಶಿಕ್ಷಣ ನೀಡಲಾಗುವುದು.

ರಾಜ್ಯದಲ್ಲಿ 10,000 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಸದ್ಯ 4 ರಿಂದ 5000 ಅಂಗನವಾಡಿಗಳಲ್ಲಿ ಎಲ್.ಕೆ.ಜಿ., ಯುಕೆಜಿ ಆರಂಭಿಸಲಾಗುವುದು. ಮುಂದಿನ ದಿನದಗಳಲ್ಲಿ ಹಂತ ಹಂತವಾಗಿ ಎಲ್ಲಾ ಕೇಂದ್ರಗಳಿಗೆ ವಿಸ್ತರಿಸಲಾಗುವುದು. ಕೇಂದ್ರ ಪಠ್ಯಕ್ರಮವನ್ನು ಮಕ್ಕಳಿಗೆ ಕಲಿಸಲಿದ್ದು, ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular