HomeLatest Newsರಾಜ್ಯದ ಜನತೆಗೆ ಗುಡ್ ನ್ಯೂಸ್: 1200 ಚದರಡಿ ವಿಸ್ತೀರ್ಣದ ಸೈಟುಗಳಿಗೆ ಒಸಿ ವಿನಾಯಿತಿ: ಸರ್ಕಾರ ಆದೇಶ

ರಾಜ್ಯದ ಜನತೆಗೆ ಗುಡ್ ನ್ಯೂಸ್: 1200 ಚದರಡಿ ವಿಸ್ತೀರ್ಣದ ಸೈಟುಗಳಿಗೆ ಒಸಿ ವಿನಾಯಿತಿ: ಸರ್ಕಾರ ಆದೇಶ

ಬೆಂಗಳೂರು: ನೂತನವಾಗಿ ರಚಿಸಿದ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 1,200 ಚದರ ಅಡಿ ವಿಸ್ತೀರ್ಣಗಳಲ್ಲಿ ನೆಲ ಮತ್ತು ಎರಡು ಅಂತಸ್ತು ಕಟ್ಟಡಕ್ಕೆ ಸ್ವಾಧೀನಾನುಭವ ಪತ್ರ(ಒಸಿ)ಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

30*40 ಅಡಿವರಗಿನ ಸೈಟಲ್ಲಿ ನೆಲ ಎರಡು ಅಂತಸ್ತು ಕಟ್ಟಡಗಳಿಗೆ, ಸ್ಟಿಲ್ಟ್ ಮತ್ತು ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿಯಿಂದ ವಿನಾಯಿತಿ ನೀಡಲಾಗಿದೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಕಳೆದ ವರ್ಷದಿಂದ ನಂಬಿಕೆ ನಕ್ಷೆ ವ್ಯವಸ್ಥೆ ಜಾರಿ ಮಾಡಲಾಗಿದೆ. ಇದರಡಿ ಆಟೋಮೇಮೀಟರ್ ಆನ್ಲೈನ್ ತಂತ್ರಾಂಶದ ಮೂಲಕ 50*80(ನಾಲ್ಕು ಸಾವಿರ ಚದರಡಿ) ವಿಸ್ತೀರ್ಣವರೆಗಿನ ಸ್ಥಳದಲ್ಲಿ ನಿರ್ಮಿಸುವ ವಸತಿ ಕಟ್ಟಡಗಳಿಗೆ ಅರ್ಜಿ ಸಲ್ಲಿಸಿದ ದಿನವೇ ಕರಡು ನಕ್ಷೆ ಹಾಗೂ 15 ದಿನದಲ್ಲಿ ಅಂತಿಮ ನಕ್ಷೆ ಮಂಜೂರಾತಿಗೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಂಬಿಕೆ ನಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಸಣ್ಣ ಪ್ರಮಾಣದ ನಿವೇಶನದಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲು ಸಹ ಮನವಿ ಮಾಡಲಾಗಿತ್ತು ಗ್ರೇಟರ್.

ಬೆಂಗಳೂರು ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ ಮತ್ತು ಎರಡು ಅಂತಸ್ತು ಅಥವಾ ಸ್ಟಿಲ್ಟ್ ಮತ್ತು ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.

ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿಸದೆ ಒಸಿ ಹೊಂದಿಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್, ಚರಂಡಿ ಸಂಪರ್ಕ ನೀಡದಂತೆ ಸುಪ್ರೀಂಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದ್ದು, ಇದರ ಅನ್ವಯ ಕಳೆದ ಆರು ತಿಂಗಳ ರಾಜ್ಯದಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣ ಮಾಡಿದ ಕಟ್ಟಡಗಳಿಗೆ ಒಸಿ ನಿರಾಕರಿಸಿ ವಿದ್ಯುತ್, ನೀರು ಸಂಪರ್ಕ ನೀಡಿರಲಿಲ್ಲ. ಇದರಿಂದಾಗಿ ಲಕ್ಷಾಂತರ ಜನ ತೊಂದರೆಗೆ ಒಳಗಾಗಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular