HomeLatest Newsರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲ ತಾಲೂಕು ಆಸ್ಪತ್ರೆಗಳಿಗೆ ‘ಪುನೀತ್ ಹೃದಯಜ್ಯೋತಿ ಯೋಜನೆ ವಿಸ್ತರಣೆ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲ ತಾಲೂಕು ಆಸ್ಪತ್ರೆಗಳಿಗೆ ‘ಪುನೀತ್ ಹೃದಯಜ್ಯೋತಿ ಯೋಜನೆ ವಿಸ್ತರಣೆ

ಧಾರವಾಡ: ರಾಜ್ಯದಲ್ಲಿ ಹೃದಯ ಖಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಿಲ್ಲ. ಆರೋಗ್ಯ ಇಲಾಖೆಯ ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಪುನೀತ್ ರಾಜ್‍ ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿದ್ದಾರೆ.

ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬೆಳಗಾವಿ ವಿಭಾಗ ಮಟ್ಟದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.

ರಾಜ್ಯದ ಒಂಬತ್ತು ತಾಲೂಕು ಸ್ಥಾನದಲ್ಲಿರುವ 10 ಹಾಸಿಗೆಯ ಆಸ್ಪತ್ರೆಗಳನ್ನು 30 ಹಾಸಿಗೆಯ ಆಸ್ಪತ್ರೆಗಳನ್ನಾಗಿ ಉನ್ನತ್ತೀಕರಿಸಿ, ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಕ್ರಮಕೈಗೊಂಡಿದೆ. ಅದರಲ್ಲಿ ಧಾರವಾಡ ಜಿಲ್ಲೆಯ ಅಳ್ನಾವರ ಮತ್ತು ಅಣ್ಣಿಗೇರಿ ಆಸ್ಪತ್ರೆಗಳು ಸೇರಿದ್ದು, ಬರುವ ನವೆಂಬರದಿಂದ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಸಚಿವರು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ ಅಲ್ಲಿ ಬಿಡುಗಡೆಯಾದ ಗೃಹ ಆರೋಗ್ಯ ಎಂಬ ಯೋಜನೆಯು ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಚಾಲನೆ ನೀಡಲಾಗಿದೆ. ಇದು ನಮಗೆ ಮಹತ್ವಾಕಾಂಕ್ಷೆಯ ಯೋಚನೆಯಾಗಿತ್ತು. ಅದರ ಮಾಹಿತಿ ತಿಳಿದು ಇನ್ನು ಹೆಚ್ಚಾಗಿ ಬೇರೆ ಸುಧಾರಣೆ ತರಲಾಗುತ್ತದೆ ಎಂದು ಹೇಳಿದರು.

ಹೃದಯಾಘಾತದಲ್ಲಿ ಯಾವುದೇ ರೀತಿ ಬದಲಾವಣೆ ಆಗಿರುವುದಿಲ್ಲ. ಮೊದಲು ಹೇಗೆ ಇತ್ತೋ ಹಾಗೆ ಈಗಲೂ ಸಹ ಇದೆ. ಹೃದಯಾಘಾತಕ್ಕೆ ಹಲವಾರು ಕಾರಣಗಳು ಇವೆ. ನಮ್ಮ ಜೀವನ ಶೈಲಿ, ಆಹಾರ ಪದ್ಧತಿ, ಒತ್ತಡದ ಜೀವನ. ಆದ್ದರಿಂದ ಹೆಚ್ಚು ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು. 40 ರಿಂದ 50 ವರ್ಷದ ವಯಸ್ಕರು ಕನಿಷ್ಠ ಎರಡು ವರ್ಷಕ್ಕೆ ಒಂದು ಸಾರಿಯಾದರೂ ಇಸಿಜಿ, ರಕ್ತದೊತ್ತಡ ಪರೀಕ್ಷೆ ಮಾಡಿಸಬೇಕು. ಅದರಲ್ಲಿ ಏನಾದರೂ ತೊಂದರೆ ಕಂಡು ಬಂದರೆ, ಸುಲಭವಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು. ಈ ಕುರಿತು ಸಾರ್ವಜನಿಕರಲ್ಲಿ  ಜಾಗೃತಿ ಮೂಡಿಸಬೇಕೆಂದು ಅವರು ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular