ರಾಜ್ಯದ ಜನತೆಗೆ ಗುಡ್ ನ್ಯೂಸ್: ದಕ್ಷಿಣ ಕ್ಷೇತ್ರಗಳ ಯಾತ್ರೆಗೆ 5 ಸಾವಿರ ರೂ.

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ.

ಈ ಪ್ಯಾಕೇಜ್‌ಗೆ ಒಟ್ಟು 15,000 ರೂ. ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ 5,000ರೂ.  ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ 10,000 ರೂ. ಮಾತ್ರ ಪಾವತಿಸಬೇಕಾಗುತ್ತದೆ.

3 ಟೈರ್‌ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ ಇರುತ್ತದೆ. ಪ್ರತಿ ಕೋಚ್‌ಗೆ ಪ್ರವಾಸ ಮಾರ್ಗದರ್ಶಕರು, ರೈಲಿನಲ್ಲಿ ಭದ್ರತಾ ವ್ಯವಸ್ಥೆ ಇರುತ್ತದೆ.

ಟಿಕೆಟ್‌ ಬುಕ್ಕಿಂಗ್‌ ಗಾಗಿ https://irctctourism.com ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಥವಾ 9363488229 ಗೆ ಕರೆ ಮಾಡಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read