ಮೈಸೂರು: ಜನಸಂಖ್ಯೆಗೆ ಅನುಗುಣವಾಗಿ ಹೃದ್ರೋಗ ಚಿಕಿತ್ಸೆಯನ್ನು ವಿಸ್ತರಿಸುವ ಉದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿಯೂ ಸ್ಯಾಟ್ ಲೈಟ್ ಹೃದ್ರೋಗ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಬಿ. ದಿನೇಶ್ ತಿಳಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸುತ್ತೂರು ಶಾಖಾ ಮಠದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿ ಮಾಡಿದ ಬಳಿಕ ಅವರು ಮಾತನಾಡಿದರು.
2040ರ ವೇಳೆಗೆ ಜನಸಂಖ್ಯೆ ಶೇಕಡ 15ರಷ್ಟು ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯು ಅಗತ್ಯ ಮೂಲ ಸೌಕರ್ಯ ಹೆಚ್ಚಿಸಿಕೊಂಡು ಸೇವೆಯನ್ನು ವಿಸ್ತರಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಗೊಂದು ಸ್ಯಾಟ್ ಲೈಟ್ ಹೃದ್ರೋಗ ಕೇಂದ್ರಗಳನ್ನು ಆರಂಭಿಸಲು ಪ್ರಯತ್ನಿಸಲಾಗುತ್ತಿದೆ. ಸರ್ಕಾರದಿಂದ ಅನುಮೋದನೆ ಪಡೆದು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಡಾ. ಪುನೀತ್ ರಾಜಕುಮಾರ್ ಯೋಜನೆ ಜಾರಿಯಲ್ಲಿದ್ದು, ತಾಲೂಕು ಹಂತದಲ್ಲಿಯೇ ಹೃದ್ರೋಗಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕು ಮಟ್ಟದಲ್ಲಿಯೇ ಗೋಲ್ಡನ್ ಅವರ್ ನಲ್ಲಿ ಎರಡು ಚುಚ್ಚುಮದ್ದುಗಳನ್ನು ನೀಡುವುದರಿಂದ ಸಾವಿರಾರು ಹೃದ್ರೋಗಿಗಳ ಜೀವ ಉಳಿದಿದೆ ಎಂದು ಹೇಳಿದ್ದಾರೆ